ರಾಜಕೀಯ

ಸುಧಾಕರ್‌ ಸ್ಥಿತಿ ಗಂಭೀರ: ಕೆಲ‌ವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್‌; HDK ಹೀಗೆ ಹೇಳಿದ್ದು ಯಾರಿಗೆ? Video

ಸಚಿವ ಸುಧಾಕರ್ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಧಾಕರ್‌ ಸ್ಥಿತಿ ಗಂಭೀರ: ಕೆಲ‌ವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್‌; HDK ಹೀಗೆ ಹೇಳಿದ್ದು ಯಾರಿಗೆ? Video
ಡಿ ಸುಧಾಕರ್‌ - ಎಚ್ ಡಿ ಕುಮಾರಸ್ವಾಮಿ
Published On :

ಚಿತ್ರದುರ್ಗ: ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್‌ ಅವರ‌ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕೆಲ‌ವರು ಇಂತಹ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್ ಇದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಚಿವ ಸುಧಾಕರ್ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ, ಸುಧಾಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ.

ಇದರ ಬೆನ್ನಲ್ಲೇ ಇಂದು ಚಿತ್ರದುರ್ಗದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಸಚಿವ‌ ಸುಧಾಕರ್ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸ್ತಿದ್ದಾರೆ. ಈ ವೇಳೆ ನಾನು ಜೆಡಿಎಸ್ ಸ್ಥಾನದ ಬಗ್ಗೆ ಚರ್ಚೆ ಮಾಡಲ್ಲ. ಹಿರಿಯೂರು ಸೇರಿದಂತೆ ಬೇರೆ ಕ್ಷೇತ್ರದ ಬಗ್ಗೆಯೂ ಮಾತಾಡಲ್ಲ. ಆದರೆ ಆಸ್ಪತ್ರೆಯ ಒಳಗೆ ಏನು ನಡೆಯುತ್ತಿದೆ ಎಂಬುದನ್ನು ನೋಡಬೇಕು. ಆ ವ್ಯಕ್ತಿ ಎಷ್ಟು ನೋವು ಅನುಭವಿಸುತ್ತಿದ್ದಾನೋ ಪಾಪ. ಯಾವ ಕಾರಣಕ್ಕೆ ಕೆಲ ವಿಷಯ ಮುಚ್ಚಿಟ್ಟಿದ್ದಾರೆ ಎಂಬುದು ತಿಳಿಯಬೇಕು. ಆ ವ್ಯಕ್ತಿಯಿಂದ‌ ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಮುಚ್ಚಿಡಲಾಗಿದೆಯೇ? ಎಂಬ ಅನುಮಾನ ವ್ಯಕ್ತಪಡಿಸಿದರು.

ಇಂಥ ವಿಚಾರಗಳಲ್ಲಿ ನಾನು ಹೆಚ್ಚಿಗೆ ಚರ್ಚೆ ಮಾಡುವುದಕ್ಕೆ ಹೋಗಲ್ಲ. ಆದರೆ ಕೆಲ ವ್ಯಕ್ತಿಗಳು ಇಂಥ ಸಮಯವನ್ನು ದುರ್ಬಳಕೆ ಮಾಡಿಕೊಳ್ಳುವಲ್ಲಿ ಎಕ್ಸ್‌ಪರ್ಟ್ ಆಗಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.

ಇದೇ ವೇಳೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಅಹಿಂದ ಸಮಾವೇಶ ನಡೆಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕೈ ನಾಯಕರು ಕುರ್ಚಿ ಉಳಿಸಿಕೊಳ್ಳಲು ಅಹಿಂದ ಸಮಾವೇಶ ನಡೆಸ್ತಿದ್ದಾರೆ. ಅಹಿಂದ ಸಮುದಾಯದ ಜನ ಏನು ಹೇಳ್ತಿದ್ದಾರೆ. ನಮ್ಮ ಭಿಕ್ಷೆಯಿಂದ ಕಾಂಗ್ರೆಸ್‌ಗೆ ಅಧಿಕಾರ ಎನ್ನುತ್ತಿದ್ದಾರೆ. ಈ ಪರಿಸ್ಥಿಯಲ್ಲಿ ಸಮಾವೇಶ ಮಾಡ್ತಿದ್ದಾರೆ. ಸಮಾವೇಶಕ್ಕೆ ದುಡ್ಡು ಖರ್ಚು ಮಾಡಿ ಜನ ಸೇರಿಸುತ್ತಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.