ರಾಜಕೀಯ

ಸತೀಶ್ ಜಾರಕಿಹೊಳಿ ಭಾವೀ DCM: ಸಂಪುಟ ವಿಸ್ತರಣೆ ಹೊಸ್ತಿಲಲ್ಲಿ ಅಭಿಮಾನಿಗಳಿಂದ ಪೋಸ್ಟರ್ ವೈರಲ್

ರಾಜ್ಯ ಕಾಂಗ್ರೆಸ್ ಹೈಕಮಾಂಡ್ ಹಂತದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಸತೀಶ್ ಜಾರಕಿಹೊಳಿ ಅವರು ಈ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಕಾತರರಾಗಿದ್ದಾರೆ.

ಸತೀಶ್ ಜಾರಕಿಹೊಳಿ ಭಾವೀ DCM: ಸಂಪುಟ ವಿಸ್ತರಣೆ ಹೊಸ್ತಿಲಲ್ಲಿ ಅಭಿಮಾನಿಗಳಿಂದ ಪೋಸ್ಟರ್ ವೈರಲ್
ಸತೀಶ್ ಜಾರಕಿಹೊಳಿ ಪೋಸ್ಟರ್ ಗಳು
Published On :

ರಾಜ್ಯ ಸಚಿವ ಸಂಪುಟ ನಾಡಿದ್ದು ಸೋಮವಾರ ವಿಸ್ತರಣೆಯಾಗುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಮುಂದಿನ ಉಪಮುಖ್ಯಮಂತ್ರಿಯನ್ನಾಗಿ (DCM) ನೇಮಿಸುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜಕೀಯ ವಲಯದಲ್ಲಿ ಚರ್ಚೆಗಳು ಹಾಗೂ ಶುಭಾಶಯಗಳ ಪೋಸ್ಟ್‌ಗಳು ಹರಿದಾಡುತ್ತಿವೆ.

ರಾಜ್ಯ ಕಾಂಗ್ರೆಸ್ ಹೈಕಮಾಂಡ್ ಹಂತದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಸತೀಶ್ ಜಾರಕಿಹೊಳಿ ಅವರು ಈ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಕಾತರರಾಗಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂದು ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ಪ್ರಾದೇಶಿಕ ಹಾಗೂ ಸಮುದಾಯವಾರು ಪ್ರಾತಿನಿಧಿತ್ವಕ್ಕಾಗಿ ಪಕ್ಷವು ಮತ್ತಷ್ಟು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಿದೆ.

ಅಹಿಂದ (AHINDA) ಮತಬ್ಯಾಂಕ್ ಬಲಪಡಿಸುವ ಮತ್ತು ಸಂಘಟನಾತ್ಮಕವಾಗಿ ಮುಂಚೂಣಿಯಲ್ಲಿರುವ ಸತೀಶ್ ಜಾರಕಿಹೊಳಿ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.

2028ರ ವಿಧಾನಸಭಾ ಚುನಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಗೂ ತಾವು ಆಕಾಂಕ್ಷಿ ಎಂದು ಅವರು ಈ ಹಿಂದೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.ಸದ್ಯದ ಮಟ್ಟಿಗೆ ಪಕ್ಷದ ಸಂಘಟನೆ ಹಾಗೂ ಸರ್ಕಾರದ ಜನಪರ ಕೆಲಸಗಳತ್ತ ಗಮನಹರಿಸಿರುವುದಾಗಿ ಅವರು ತಿಳಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಇನ್ನೂ ಎರಡು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆ ಕುರಿತು ಊಹಾಪೋಹಗಳು ಜೋರಾಗಿರುವ ಬೆನ್ನಲ್ಲೇ, ಆ ಹುದ್ದೆಗಳಿಗಾಗಿ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಎಂ.ಬಿ. ಪಾಟೀಲ್ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.