ಆಂತರಿಕ ಅಸಮಾಧಾನ: ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ CM ಸಿಎಂ ಸಿದ್ದರಾಮಯ್ಯ ಗೈರಾಗಿದ್ದೇಕೆ?
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಾಗಿದ್ದು 19 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಾಗಿದ್ದು 19 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಆದರೆ ಈ ಪ್ರಮುಖ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿದ್ದರು. 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದ ಸಿದ್ದರಾಮಯ್ಯ, ಮಧ್ಯಾಹ್ನವೇ ತಮ್ಮ ಆಪ್ತರೊಂದಿಗೆ ಪ್ರಮಾಣ ವಚನ ಸಮಾರಂಭಕ್ಕೆ ತಾನು ಹೋಗುವುದಿಲ್ಲ ಎಂದು ಅವರು ಹೇಳಿದ್ದರು. ಈ ಗೈರಿಗೆ ನಿಖರ ಕಾರಣ ಮಾತ್ರ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ನೂತನ ಸಚಿವರ ಪದಗ್ರಹಣಕ್ಕೆ ಮಾಜಿ ಸಿಎಂ ಗೈರಾಗಿರುವುದು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಒಳಗಿನ ಆಂತರಿಕ ಅಸಮಾಧಾನವನ್ನು ಎತ್ತಿ ತೋರಿಸುತ್ತಿದೆಯೇ ಎಂಬ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿ ಜೋರಾಗಿ ನಡೆಯುತ್ತಿವೆ.
ಮೊದಲಿಗೆ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಕ್ರಮವಾಗಿ ಎಚ್.ಸಿ.ಬಾಲಕೃಷ್ಣ, ಕೆ.ಎಸ್.ಬಸವಂತಪ್ಪ, ಬಸವರಾಜ್ ರಾಯರೆಡ್ಡಿ, ಎನ್.ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್, ಬಿ.ನಾಗೇಂದ್ರ, ಪಿ.ಎಂ.ನರೇಂದ್ರಸ್ವಾಮಿ, ಸಿ.ಪುಟ್ಟರಂಗಶೆಟ್ಟಿ, ಟಿ.ರಘುಮೂರ್ತಿ, ರಿಜ್ವಾನ್ ಅರ್ಷದ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್, ಶಿವಲಿಂಗೇಗೌಡ, ಶಿವರಾಜ್ ತಂಗಡಗಿ, ವಿಜಯಾನಂದ ಕಾಶಪ್ಪನವರ್, ಜಮೀರ್ ಅಹ್ಮದ್ ಖಾನ್ ಅವರು ಪ್ರಮಾಣವಚನ ಸ್ವೀಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



