ನೂತನ ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!
ನೂತನ ಸಚಿವರ ಪಟ್ಟಿ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್ ಸಚಿವಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಕೆಲವು ಶಾಸಕರು ರಾಜೀನಾಮೆ ನೀಡುವುದಾಗಿ ಹೇಳುತ್ತಿದ್ದಾರೆ.

ಬೆಂಗಳೂರು: ಕೊನೆಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ಸಂಜೆ ವಿಸ್ತರಣೆಯಾಗುತ್ತಿದ್ದು, 20 ನೂತನ ಸಚಿವರ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಪ್ರಕಟಿಸಿದೆ.
ನೂತನ ಸಚಿವರ ಪಟ್ಟಿ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್ ಸಚಿವಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಕೆಲವು ಶಾಸಕರು ರಾಜೀನಾಮೆ ನೀಡುವುದಾಗಿ ಹೇಳುತ್ತಿದ್ದಾರೆ.
ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು, ಕೊನೆ ಗಳಿಗೆಯಲ್ಲಿ ಸಚಿವ ಸ್ಥಾನಕ್ಕೆ ಕೈ ತಪ್ಪಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಹೊಸ ಸಮೀಕರಣದೊಂದಿಗೆ, ಸಚಿವ ಸ್ಥಾನ ಭರ್ತಿ ಮಾಡಿದ್ದು, ಯಶವಂತರಾಯಗೌಡ ಪಾಟೀಲ್ ಸೇರಿದಂತೆ ಹಲವು ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿದೆ.
ಕೆಲವು ದಿನಗಳ ಹಿಂದೆ ಇಂಡಿ ಶಾಸಕ ಯಶವಂತ ರಾಯಗೌಡ ಪಾಟೀಲ್ ಅವರ ಬೆಂಬಲಿಗರು ಬೆಂಗಳೂರಿನಲ್ಲಿ ಸಿಎಂ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದ್ದರು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರು ವಿಜಯಪುರದ ಮತ್ತೊಬ್ಬ ಶಾಸಕರನ್ನು ಸಚಿವರನ್ನಾಗಿ ನೇಮಿಸುವುದನ್ನು ವಿರೋಧಿಸಿದ್ದಾರೆ ಎಂದು ಆರೋಪಿಸಿದ್ದರು. ಅವರು ತಮ್ಮ ಪ್ರಾಮುಖ್ಯತೆಯನ್ನು ಕಳೆದುಕೊಳ್ಳುತ್ತಾರೆ ಎಂಬ ಭಯದಿಂದ ಯಶವಂತ ರಾಯಗೌಡ ಪಾಟೀಲ್ ಅವರು ಸಚಿವರಾಗುವುದಕ್ಕೆ ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ವಿಜಯಪುರ ಜಿಲ್ಲೆಗೆ ಇನ್ನೂ ಒಂದು ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




