'CM ಡಿ.ಕೆ ಶಿವಕುಮಾರ್ ಸೂಚನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ, ಆದ್ರೂ...': ರಾಜೀನಾಮೆ ಬಗ್ಗೆ ಹೊರಟ್ಟಿ ಹೇಳಿದ್ದೇನು?
ಕಾಂಗ್ರೆಸ್ ಹೈಕಮಾಂಡ್ ಸಭಾಪತಿ ಸ್ಥಾನಕ್ಕೆ ಹೆಸರು ಪ್ರಕಟಿಸಿದ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್ ಅವರು ಮಂಗಳವಾರ ಬಸವರಾಜ ಹೊರಟ್ಟಿ ಅವರಿಗೆ ಕರೆ ಮಾಡಿ, ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಅವರ ಹೆಸರನ್ನು ಪ್ರಕಟಿಸಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಾಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಒತ್ತಡ ಹಾಕುತ್ತಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸಭಾಪತಿ ಸ್ಥಾನಕ್ಕೆ ಹೆಸರು ಪ್ರಕಟಿಸಿದ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್ ಅವರು ಮಂಗಳವಾರ ಬಸವರಾಜ ಹೊರಟ್ಟಿ ಅವರಿಗೆ ಕರೆ ಮಾಡಿ, ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.
ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕರೆ ಮಾಡಿದ್ದ ಸಿಎಂ, ‘ಪಕ್ಷದ ಹೈಕಮಾಂಡ್ ಸೂಚಿಸಿದೆ, ದಯವಿಟ್ಟು ರಾಜೀನಾಮೆ ನೀಡಿ’ ಎಂದಿದ್ದಾರೆ. ಡಿಕೆ ಶಿವಕುಮಾರ್ ಕರೆ ಬಗ್ಗೆ ಬಸವರಾಜ ಹೊರಟ್ಟಿ ಅವರ ತೀವ್ರ ಬೇಸರಗೊಂಡಿದ್ದಾರೆ.
ಸಿಎಂ ಕರೆ ಮಾಡಿದ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿರುವ ಬಸವರಾಜ ಹೊರಟ್ಟಿ ಅವರು, ‘ಇದು ಕಲುಷಿತ ರಾಜಕಾರಣ. ಮನಸ್ಸಿಗೆ ತುಂಬಾ ನೋವಾಗಿದೆ. ಇತಿಹಾಸದಲ್ಲೇ ಈ ರೀತಿ ಆಗಿರಲಿಲ್ಲ. ಪಕ್ಷದ ಲೆಟರ್ ಹೆಡ್ನಲ್ಲಿ ಎಂದೂ ಈ ರೀತಿ ಆಯ್ಕೆ ಆಗಿರಲಿಲ್ಲ. ಸಭಾಪತಿ, ಸಭಾಧ್ಯಕ್ಷರ ಸ್ಥಾನ ಸಾಂವಿಧಾನಿಕ ಹುದ್ದೆ. ನನಗೆ ನೋಟಿಸ್ ಕೊಡಲಿ ಉತ್ತರ ಕೊಡುತ್ತೇನೆ. ರಾಜಕಾರಣದಲ್ಲಿ ಒಂದು ಕಪ್ಪು ಚುಕ್ಕೆನೂ ಇಲ್ಲ. ಯಾವ ಕಾರಣಕ್ಕೆ ರಾಜೀನಾಮೆ ಕೇಳಿದರು ಎನ್ನುವುದು ಮುಖ್ಯ’ ಎಂದಿದ್ದಾರೆ.
‘ಅರ್ಧ ಗಂಟೆ ಹಿಂದೆ ಸಿಎಂ ಕರೆ ಮಾಡಿದ್ದರು. ಪಕ್ಷದಿಂದ ಆಯ್ಕೆ ಪ್ರಕ್ರಿಯೆ ಆಗಿದೆ. ತಾವು ರಾಜೀನಾಮೆ ನೀಡಿ ಅಂದರು. ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಿ, ನಾನು ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಜೊತೆಗೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ’ ಎಂದರು.
ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡೋ ಬಗ್ಗೆ ನಾನಿನ್ನೂ ನಿರ್ಧಾರ ಮಾಡಿಲ್ಲ. ವಿಪಕ್ಷ ನಾಯಕರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ಈ ರೀತಿ ಆಗುತ್ತೆ ಅಂತಾ ನಿರೀಕ್ಷೆ ಮಾಡಿರಲಿಲ್ಲ. ಸಭಾಪತಿ ಪೀಠಕ್ಕೆ ಅವಮಾನ ಮಾಡಿದಂತೆ. ನನ್ನ ಅವಧಿ ಇನ್ನೂ ಇದೆ. ಹೀಗಾಗಿ ಸದ್ಯಕ್ಕೆ ರಾಜೀನಾಮೆ ಕೊಡಲ್ಲ ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



