ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜೀನಾಮೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಹೊರಟ್ಟಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಹಿರಿಯ ರಾಜಕಾರಣಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಶುಕ್ರವಾರ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜೀನಾಮೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಹೊರಟ್ಟಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
75 ಸದಸ್ಯ ಬಲದ ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ, ಸಭಾಪತಿ ಮತ್ತು ಉಪಸಭಾಪತಿ ಎರಡೂ ಹುದ್ದೆಗಳನ್ನು ತನ್ನ ವಶಕ್ಕೆ ಪಡೆಯಲು ಆಡಳಿತಾರೂಢ ಕಾಂಗ್ರೆಸ್ ಮುಂದಾಗಿದೆ. ಈ ರಾಜಕೀಯ ಬೆಳವಣಿಗೆಯ ನಡುವೆಯೇ ಬಸವರಾಜ ಹೊರಟ್ಟಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಈ ಮೊದಲು ಮುಂಗಾರು ಅಧಿವೇಶನ ಆರಂಭವಾದ ಬಳಿಕ ಅಂದರೆ ಆಗಸ್ಟ್ 14 ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನಿಸಿದ್ದರು.
ಈಗ ಯಾವುದೇ ಒತ್ತಡವಿಲ್ಲದೆ, ಸಂಪೂರ್ಣ ಸ್ವಇಚ್ಛೆಯಿಂದಲೇ ತಾವು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ನೂತನ ಸಭಾಪತಿ ಆಯ್ಕೆಯಾಗುವವರೆಗೆ ಬಸವರಾಜ ಹೊರಟ್ಟಿ ಅವರೇ ಹಂಗಾಮಿ ಸಭಾಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



