MLC ಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣ ವಚನ ಸ್ವೀಕಾರ; Video
ಈ ಸಂದರ್ಭದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಬಳಿಕ ಸಭಾಪತಿ ಹೊರಟ್ಟಿಯವರನ್ನು ಸಿಎಂ ಡಿ ಕೆ ಶಿವಕುಮಾರ್, ಸಚಿವ ನರೇಂದ್ರ ಸ್ವಾಮಿ ಹಾಗೂ ಸಲೀಂ ಅಹ್ಮದ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಗಾಯತ್ರಿ ಶಾಂತೇಗೌಡ ಇಂದು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಬಳಿಕ ಸಭಾಪತಿ ಹೊರಟ್ಟಿಯವರನ್ನು ಸಿಎಂ ಡಿ ಕೆ ಶಿವಕುಮಾರ್, ಸಚಿವ ನರೇಂದ್ರ ಸ್ವಾಮಿ ಹಾಗೂ ಸಲೀಂ ಅಹ್ಮದ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಗಾಯತ್ರಿ ಶಾಂತೇಗೌಡ ಅವರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿದ್ದರೂ, ಕೊನೆಯ ಕ್ಷಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿತ್ತು.ಎಂಎಲ್‌ಸಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ, ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸ್ಪಷ್ಟನೆ ಸಿಗುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



