ಯಾರು ಯಾರಿಗೆ ಮೋಸ ಮಾಡಿದ್ದಾರೆ ಎಂಬುದನ್ನ ಜನರ ಮುಂದೆ ಹೇಳ್ತೇನೆ ಬನ್ನಿ: ತಂಗಡಗಿ, ರಾಯರೆಡ್ಡಿ ವಿರುದ್ಧ ಇಕ್ಬಾಲ್ ಅನ್ಸಾರಿ ವಾಗ್ದಾಳಿ
ಚುನಾವಣೆ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಗಾವತಿ ಕ್ಷೇತ್ರಕ್ಕೆ ಬರದಂತೆ ತಡೆಯಲಾಗಿದೆ ಎಂದು ಆರೋಪಿಸಿದ ಅವರು, ನಾನು ನಿಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಬರುವಂತೆ ಕೆಲಸ ಮಾಡಿದ್ದೆ.

ಕೊಪ್ಪಳ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅಲ್ಲಲ್ಲಿ ಅಸಮಾಧಾನ ಹೊಗೆಯಾಡುತ್ತಿದ್ದು, ಇದೀಗ ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಸಚಿವ ಶಿವರಾಜ್ ತಂಗಡಗಿ, ಸಚಿವ ಬಸವರಾಜ ರಾಯರೆಡ್ಡಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಅನ್ಸಾರಿ ಮಾತನಾಡಿದ್ದಾರೆ ಎನ್ನುವ ಆಡಿಯೋ ವೈರಲ್ ಆಗುತ್ತಿದ್ದು, ತಮ್ಮ ಸೋಲಿಗೆ ಈ ನಾಯಕರೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಸಚಿವ ಶಿವರಾಜ್ ತಂಗಡಗಿ, ಇಕ್ಬಾಲ್ ಅನ್ಸಾರಿ ಬೇರೆಯವರ ಬಗ್ಗೆ ಮಾತನಾಡುವ ಬದಲು ಜನರ ನಡುವೆ ಹೋಗಿ ಗೆದ್ದು ತೋರಿಸಲಿ ಎಂದು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಇಕ್ಬಾಲ್ ಅನ್ಸಾರಿ, ಬಹಿರಂಗ ವೇದಿಕೆಗೆ ಚರ್ಚೆಗೆ ಬನ್ನಿ. ಯಾರು ಯಾರಿಗೆ ಮೋಸ ಮಾಡಿದ್ದಾರೆ ಎಂಬುದನ್ನು ಜನರ ಮುಂದೆ ಹೇಳುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಗಂಗಾವತಿ ಕ್ಷೇತ್ರಕ್ಕೆ ಬಂದು ತಮ್ಮ ವಿರುದ್ಧ ರಾಜಕೀಯ ಮಾಡಲಾಗಿದೆ ಎಂದು ಆರೋಪಿಸಿದರು. ತಮ್ಮ ಸೋಲಿಗೆ ಶಾಸಕ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರಡ್ಡಿ ಹಾಗೂ ಸಚಿವ ಶಿವರಾಜ್ ತಂಗಡಗಿ ಕಾರಣರಾಗಿದ್ದಾರೆ ಎಂದು ದೂರಿದ್ದಾರೆ.
ಚುನಾವಣೆ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಗಾವತಿ ಕ್ಷೇತ್ರಕ್ಕೆ ಬರದಂತೆ ತಡೆಯಲಾಗಿದೆ ಎಂದು ಆರೋಪಿಸಿದ ಅವರು, ನಾನು ನಿಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಬರುವಂತೆ ಕೆಲಸ ಮಾಡಿದ್ದೆ. ಆದರೆ ನೀವು ನನ್ನ ಕ್ಷೇತ್ರದಲ್ಲಿ ವಿವಿಧ ಸಮುದಾಯಗಳ ಮತಗಳು ನನಗೆ ಸಿಗದಂತೆ ಕೆಲಸ ಮಾಡಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನು ಕ್ಷೇತ್ರದಲ್ಲಿ ಪ್ರಚಾರ ಮಾಡದಿದ್ದರೆ 58 ಸಾವಿರ ಮತಗಳು ನನಗೆ ಹೇಗೆ ಬಂದವು? ಎಂದು ಪ್ರಶ್ನಿಸಿದ ಅನ್ಸಾರಿ, ಇದು ತಮ್ಮ ಮೊದಲ ಎಪಿಸೋಡ್ ಮಾತ್ರ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿಯನ್ನು ದಾಖಲೆಗಳ ಸಮೇತ ಜನರ ಮುಂದೆ ಬಹಿರಂಗಪಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



