ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'
ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಆಕ್ರೋಶಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮನೆ ಮನೆಗೆ ತೆರಳಿ ಮಾತುಕತೆ ನಡೆಸಿ, ಮನವೊಲಿಸುವ ಯತ್ನ ಮಾಡಿದ್ದಾರೆ.

ಹಾಸನ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಭುಗಿಲೆದ್ದಿರುವ ಅಸಮಾಧಾನ ತಣ್ಣಗಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಮಧ್ಯೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಹೊಸ ದಾಳ ಉರುಳಿಸಿದಿದ್ದಾರೆ.
ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಆಕ್ರೋಶಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮನೆ ಮನೆಗೆ ತೆರಳಿ ಮಾತುಕತೆ ನಡೆಸಿ, ಮನವೊಲಿಸುವ ಯತ್ನ ಮಾಡಿದ್ದಾರೆ. ಆದರೂ ಯಾವುದೇ ಪ್ರಯೋಜನೆ ಆಗಿಲ್ಲ. ಇದರ ಮಧ್ಯೆ ಕುಮಾರಸ್ವಾಮಿ ಅವರು ಜೆಡಿಎಸ್ಗೆ ಬರುವಂತೆ ಓಪನ್ ಆಫರ್ ನೀಡಿದ್ದಾರೆ.
ಇಂದು ಹಾಸನದ ಹರದನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್ ಪಕ್ಷ ನೊಂದವರಿಗೆ, ನೋವಿನಲ್ಲಿರುವವರಿಗೆ ಹಾಗೂ ಸಮಸ್ಯೆಯಲ್ಲಿದ್ದವರಿಗೆ ಪರಿಹಾರ ಕೊಡುವ ಪಕ್ಷ. ನೋವಿನಲ್ಲಿರುವವರಿಗೆ ಜೆಡಿಎಸ್ ಪಕ್ಷದ ಬಾಗಿಲು ತೆರೆದಿರುತ್ತದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಶಾಸಕರಿಗೆ ಬಹಿರಂಗ ಆಫರ್ ನೀಡಿದ್ದಾರೆ.
ಕುಮಾರಸ್ವಾಮಿ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಕಾಮಗ್ರೆಸ್ ಶಾಸಕರು ಜೆಡಿಎಸ್ನತ್ತ ಮುಖ ಮಾಡುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



