ಸರ್ಕಾರ ಒತ್ತಡ ಹಾಕಿ ನನ್ನ ರಾಜೀನಾಮೆ ಕೊಡಿಸಿತು: ಬಸವರಾಜ ಹೊರಟ್ಟಿ ಆರೋಪ
ಆಗಸ್ಟ್ 7ರಂದು ತಮ್ಮ ಅಧಿಕೃತ ಕೊಠಡಿಯಲ್ಲಿ ನಡೆದ ಬೆಳವಣಿಗೆಗಳನ್ನು ಹೊರಟ್ಟಿ ಅವರು ಪತ್ರದಲ್ಲಿ ವಿವರಿಸಿದ್ದು, ತಮ್ಮ ರಾಜೀನಾಮೆಗೆ ಕಾರಣವಾದ ಸಂದರ್ಭಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಸರ್ಕಾರ ತಮ್ಮ ಮೇಲೆ ಒತ್ತಡ ಹೇರಿತ್ತು ಎಂದು ವಿಧಾನ ಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಬರೆದಿರುವ ಪತ್ರದಲ್ಲಿ ಆರೋಪಿಸಿದ್ದಾರೆ.
ಆಗಸ್ಟ್ 7ರಂದು ತಮ್ಮ ಅಧಿಕೃತ ಕೊಠಡಿಯಲ್ಲಿ ನಡೆದ ಬೆಳವಣಿಗೆಗಳನ್ನು ಹೊರಟ್ಟಿ ಅವರು ಪತ್ರದಲ್ಲಿ ವಿವರಿಸಿದ್ದು, ತಮ್ಮ ರಾಜೀನಾಮೆಗೆ ಕಾರಣವಾದ ಸಂದರ್ಭಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಆಗಸ್ಟ್ 14ರಂದು ವಿಧಾನ ಪರಿಷತ್ ಅಧಿವೇಶನವನ್ನು ಕರೆದು, ಸದನದ ಸದಸ್ಯರಿಗೆ ಕೃತಜ್ಞತೆ ಹಾಗೂ ಧನ್ಯವಾದ ಅರ್ಪಿಸಿದ ಬಳಿಕವೇ ರಾಜೀನಾಮೆ ನೀಡಲು ತಾವು ಉದ್ದೇಶಿಸಿದ್ದಾಗಿ ಹೊರಟ್ಟಿ ಪತ್ರದಲ್ಲಿ ತಿಳಿಸಿದ್ದಾರೆ.
ಆದರೆ, ಆಗಸ್ಟ್ 7ರಂದೇ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸೂಚಿಸಿದ್ದರು ಎಂದು ಅವರು ಆರೋಪಿಸಿದ್ದಾರೆ. ಈ ಬೆಳವಣಿಗೆ ಅನಿರೀಕ್ಷಿತವಾಗಿತ್ತು. ತಮ್ಮ ಅಧಿಕೃತ ಕೊಠಡಿಯಲ್ಲಿ ನಡೆದ ಬೆಳವಣಿಗೆಯಿಂದ ತಮಗೆ ಆಶ್ಚರ್ಯವಾಯಿತು ಎಂದು ಹೊರಟ್ಟಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
75 ಸದಸ್ಯ ಬಲದ ವಿಧಾನ ಪರಿಷತ್ತಿನಲ್ಲಿ ಆಡಳಿತಾರೂಢ ಕಾಂಗ್ರೆಸ್ ಬಹುಮತ ಹೊಂದಿರುವ ಹಿನ್ನೆಲೆಯಲ್ಲಿ, ಸಭಾಪತಿ ಸ್ಥಾನಕ್ಕೆ ಹಕ್ಕು ಮಂಡಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿರುವ ಸಂದರ್ಭದಲ್ಲೇ ರಾಜ್ಯಪಾಲರಿಗೆ ಹೊರಟ್ಟಿ ಬರೆದಿರುವ ಪತ್ರ ಮಹತ್ವ ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



