‘ಕೃಷಿ ವಿವಿ ವಿಚಾರದಲ್ಲಿ ನಾನು ಕಣ್ಣೀರಲ್ಲ, ರಕ್ತವನ್ನೇ ಸುರಿಸಿದ್ದೇನೆ; ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು ಕುಮಾರಸ್ವಾಮಿಯವರೇ?’: ಚೆಲುವರಾಯಸ್ವಾಮಿ ಪ್ರಶ್ನೆ
ನೀವು 20 ವರ್ಷ ಅಧಿಕಾರದಲ್ಲಿದ್ದರೂ ಮಂಡ್ಯಕ್ಕೆ ಕೃಷಿ ವಿಶ್ವವಿದ್ಯಾಲಯ ತರಲು ಸಾಧ್ಯವಾಗಲಿಲ್ಲ. ಮಂಡ್ಯವನ್ನು ನಿಮ್ಮ ಕರ್ಮಭೂಮಿ ಎಂದು ಹೇಳಿಕೊಳ್ಳಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಪ್ರಶ್ನಿಸಿದರು.

ಮಂಡ್ಯ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಚಿವ ಎನ್. ಚಲುವರಾಯಸ್ವಾಮಿ, ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತಾನು ಕಣ್ಣೀರಿನ ಬದಲು ರಕ್ತವನ್ನೇ ಸುರಿಸಿದ್ದೇನೆ ಎಂದು ಹೇಳಿದ್ದಾರೆ.
ಮಂಡ್ಯ ಶಾಸಕ ಗಣಿಗ ರವಿಕುಮಾರ್ ನೇತೃತ್ವದಲ್ಲಿ ಸಿಲ್ವರ್ ಜುಬಿಲಿ ಪಾರ್ಕ್ನಲ್ಲಿ ನೂತನ ಸಚಿವರಾದ ಚಲುವರಾಯಸ್ವಾಮಿ ಹಾಗೂ ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಜಿಲ್ಲೆಗೆ ಕುಮಾರಸ್ವಾಮಿ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದರು.
ನೀವು 20 ವರ್ಷ ಅಧಿಕಾರದಲ್ಲಿದ್ದರೂ ಮಂಡ್ಯಕ್ಕೆ ಕೃಷಿ ವಿಶ್ವವಿದ್ಯಾಲಯ ತರಲು ಸಾಧ್ಯವಾಗಲಿಲ್ಲ. ಮಂಡ್ಯವನ್ನು ನಿಮ್ಮ ಕರ್ಮಭೂಮಿ ಎಂದು ಹೇಳಿಕೊಳ್ಳಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಪ್ರಶ್ನಿಸಿದರು. ಕೃಷಿ ವಿಶ್ವವಿದ್ಯಾಲಯಕ್ಕಾಗಿ ಈಗಾಗಲೇ 100 ಕೋಟಿ ರೂಪಾಯಿ ಮಂಜೂರಾಗಿದೆ ಎಂದೂ ಹೇಳಿದರು.
ತಮ್ಮ ರಾಜಕೀಯ ಹಾಗೂ ಆಡಳಿತಾತ್ಮಕ ಸಾಧನೆಗಳನ್ನು ನೆನಪಿಸಿಕೊಂಡ ಚಲುವರಾಯಸ್ವಾಮಿ, 1999ರಲ್ಲಿ ರಾಜ್ಯಾದ್ಯಂತ ಜೆಡಿಎಸ್ ಸೋಲು ಕಂಡಿದ್ದರೂ ನಾಗಮಂಗಲದಿಂದ ತಾನು ಗೆದ್ದೆ. ನಾನು ಮೈಶುಗರ್ ಕಾರ್ಖಾನೆಯನ್ನು ಪುನರಾರಂಭಿಸಿದೆ. 2019ರಲ್ಲಿ ಅದು ಸ್ಥಗಿತಗೊಂಡಾಗ ಅದನ್ನು ಉಳಿಸಲು ನಾವು ಹೋರಾಡಿದೆವು. 20 ವರ್ಷಗಳ ಬಳಿಕ ಈ ಬಾರಿ ಕಾರ್ಖಾನೆ ಶೇ.8.75ರಷ್ಟು ಇಳುವರಿ ದಾಖಲಿಸಿದೆ. ಖಾಸಗೀಕರಣ ಮಾಡುವ ಬದಲು ನಮ್ಮ ಸರ್ಕಾರ ಕಾರ್ಖಾನೆಯನ್ನು ರಕ್ಷಿಸಿದೆ ಎಂದು ಹೇಳಿದರು.
ಕಾವೇರಿ, ಮೇಕೆದಾಟು
ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಸಂಸದರ ನಿಷ್ಕ್ರಿಯತೆಯನ್ನು ಟೀಕಿಸಿದ ಚಲುವರಾಯಸ್ವಾಮಿ, ತಮಿಳುನಾಡಿಗೆ ನೀರು ಹರಿಸುತ್ತಿರುವಾಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು.
ನಮ್ಮ ನಿಲುವು ಸ್ಪಷ್ಟವಾಗಿದೆ. ಕುಡಿಯುವ ನೀರು ಮತ್ತು ನಮ್ಮ ರೈತರ ಅಗತ್ಯಗಳು ಮೊದಲು; ತಮಿಳುನಾಡು ನಂತರ ಎಂದರು.
ಹಿಂದಿನ ಭರವಸೆಗಳ ವಿಚಾರದಲ್ಲಿ ಕುಮಾರಸ್ವಾಮಿ ಅವರನ್ನು ಟೀಕಿಸಿದ ಚೆಲುವರಾಯಸ್ವಾಮಿ, ಐದು ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಅನುಮೋದನೆ ಕೊಡಿಸುವುದಾಗಿ ಹಿಂದೆ ಹೇಳಿದ್ದ ವ್ಯಕ್ತಿ ಎಲ್ಲಿದ್ದಾರೆ” ಎಂದು ವ್ಯಂಗ್ಯವಾಡಿದರು.
ನೆರೆಯ ರಾಜ್ಯದ ಅನುಮತಿ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಮೇಕೆದಾಟು ಯೋಜನೆ ಕುರಿತು ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



