ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ
ಆಗಸ್ಟ್ 13 ರಿಂದ 27ರ ವರೆಗೆ 10 ದಿನಗಳ ಕಾಲ ನಡೆಯಲಿರುವ ಮಳೆಗಾಲದ ವಿಧಾನಮಂಡಲ ಅಧಿವೇಶನವನ್ನ ಟಿಬಿ ಜಯಚಂದ್ರ ನಡೆಸಿಕೊಡಲಿದ್ದಾರೆ.

ಬೆಂಗಳೂರು: ಆ.13 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಹಂಗಾಮಿ ಸಭಾಧ್ಯಕ್ಷರಾಗಿ ಆ.10 ರಿಂದ ಹಿರಿಯ ಕಾಂಗ್ರೆಸ್ ನಾಯಕ, ಶಿರಾ ಶಾಸಕ, ಮಾಜಿ ಸಚಿವ ಟಿಬಿ ಜಯಚಂದ್ರ (TB Jayachandra) ಕಾರ್ಯನಿರ್ವಹಿಸಲಿದ್ದಾರೆ.
ಆಗಸ್ಟ್ 13 ರಿಂದ 27ರ ವರೆಗೆ 10 ದಿನಗಳ ಕಾಲ ನಡೆಯಲಿರುವ ಮಳೆಗಾಲದ ವಿಧಾನಮಂಡಲ ಅಧಿವೇಶನವನ್ನ ಟಿಬಿ ಜಯಚಂದ್ರ ನಡೆಸಿಕೊಡಲಿದ್ದಾರೆ.
ಅಧಿವೇಶನದ ಮೊದಲ ದಿನವಾದ ಗುರುವಾರ, ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿದ್ದ ಡಿ ಸುಧಾಕರ್, ಮಾಜಿ ಪ್ರಧಾನಿ ದೇವೇಗೌಡ (HD Devegowda) ಅವರ ಪತ್ನಿ ಚೆನ್ನಮ್ಮ ದೇವೇಗೌಡ ಸೇರಿದಂತೆ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುತ್ತದೆ. ಶುಕ್ರವಾರದಿಂದ ನಿಗದಿತ ವೇಳಾಪಟ್ಟಿಯಂತೆ ಕಲಾಪ ನಡೆಯಲಿದೆ.
ಕಳೆದ ಸೋಮವಾರ ನಡೆದ ಮೊದಲ ಸಂಪುಟ ವಿಸ್ತರಣೆಯಲ್ಲಿ ಸಚಿವರಾದ 19 ಸಚಿವರಿಗೆ ಖಾತೆಗಳನ್ನ ಹಂಚಿಕೆ ಮಾಡಬೇಕಿದ್ದು, ಅಧಿವೇಶನ ಆರಂಭಕ್ಕೆ ಮುನ್ನ ಸಚಿವರುಗಳಿಗೆ ಖಾತೆಗಳನ್ನು ಹಂಚುವ ಸಂಭವವಿದೆ.
ಮುಂಗಾರು ಮಳೆ ಸಕಾಲಕ್ಕೆ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಿಕೆ, ಬಿಡದಿ ಟೌನ್‌ಶಿಪ್ ವಿಷಯಗಳು ಸದನಗಳಲ್ಲಿ ತೀವ್ರ ಚರ್ಚೆಯಾಗುವ ನಿರೀಕ್ಷೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



