ರಾಜಕೀಯ

ಉಪ ಸಭಾಪತಿ ನೇಮಕದಲ್ಲಿ ಬಿಗ್ ಟ್ವಿಸ್ಟ್: ಅಸಮಾಧಾನ ತಣಿಸಲು ಮಂಕಾಳ ವೈದ್ಯಗೆ ಮಣೆ; ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ

ಈ ಮುಂಚೆ ವಿಧಾನಸಭೆ ಉಪ ಸಭಾಪತಿ ಸ್ಥಾನಕ್ಕೆ ಆಯ್ಕೆಯಾಗಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಉಪ ಸಭಾಪತಿ ನೇಮಕದಲ್ಲಿ ಬಿಗ್ ಟ್ವಿಸ್ಟ್: ಅಸಮಾಧಾನ ತಣಿಸಲು ಮಂಕಾಳ ವೈದ್ಯಗೆ ಮಣೆ; ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ
ಮಂಕಾಳ ವೈದ್ಯ - ಪೊನ್ನಣ್ಣ
Published On :

ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಮಂಕಾಳ ವೈದ್ಯ ಅವರನ್ನು ಈಗ ವಿಧಾಸಭೆಯ ಉಪ ಸಭಾಪತಿಯಾಗಿ ನೇಮಕ ಮಾಡಲಾಗಿದೆ.

ಈ ಮುಂಚೆ ವಿಧಾನಸಭೆ ಉಪ ಸಭಾಪತಿ ಸ್ಥಾನಕ್ಕೆ ಆಯ್ಕೆಯಾಗಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಸಿಎಂ ಕಾನೂನು ಸಲಹೆಗಾರರಾಗಿದ್ದ ಪೊನ್ನಣ್ಣ ಅವರು, ಸಚಿವ ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದರು. ಆದರೆ ಇತ್ತೀಚಿಗೆ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ, ಅವರನ್ನು ಉಪ ಸಭಾಪತಿಯಾಗಿ ನೇಮಕ ಮಾಡಲಾಗಿತ್ತು. ಹೈಕಮಾಂಡ್ ಕಳುಹಿಸಿದ ಪಟ್ಟಿಯಲ್ಲಿ ಅವರನ್ನು ಉಪಾಸಭಾಧ್ಯಕ್ಷರನ್ನಾಗಿ ನೇಮಿಸಲು ಆದೇಶಿಸಲಾಗಿತ್ತು. ಆದರೆ ಇದೀಗ ಅದರಿಂದಲೂ ಕೊಕ್ ನೀಡಿ, ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಎ.ಎಸ್.ಪೊನ್ನಣ್ಣ ಅವರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಆದೇಶ
ಆದೇಶ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.