ಚಾಮರಾಜನಗರ ಕೇಸ್: ಶೂಟೌಟ್ ಅಗತ್ಯವಿತ್ತೇ?; ನ್ಯಾಯಾಂಗ ತನಿಖೆಗೆ ವಿಪಕ್ಷಗಳ ಆಗ್ರಹ
ಈ ಘಟನೆ ಕುರಿತು ಸ್ಥಳೀಯರು ನೀಡುತ್ತಿರುವ ಮಾಹಿತಿ ಮತ್ತು ಅರಣ್ಯಾಧಿಕಾರಿಗಳ ಹೇಳಿಕೆಗಳಲ್ಲಿ ವ್ಯತ್ಯಾಸವಿದೆ. ಹೀಗಾಗಿ ಇಲಾಖಾ ತನಿಖೆಯಿಂದ ಸತ್ಯ ಹೊರಬರಲು ಸಾಧ್ಯವಿಲ್ಲ. ನ್ಯಾಯಾಂಗ ತನಿಖೆಯೇ ಅಗತ್ಯ ಎಂದು ಒತ್ತಾಯಿಸಿದರು.

ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ಮೂವರು ಶಂಕಿತ ಬೇಟೆಗಾರರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ. ಅರಣ್ಯಾಧಿಕಾರಿಗಳು ಗುಂಡು ಹಾರಿಸುವ ಅಗತ್ಯವಿತ್ತೇ ಎಂದು ಅವರು ಪ್ರಶ್ನಿಸಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಂಡೇಟಿನಿಂದ ಮೃತಪಟ್ಟ ಮೂವರ ಎದೆ ಭಾಗಕ್ಕೆ ಗುಂಡು ತಗುಲಿದೆ ಎನ್ನಲಾಗುತ್ತಿದೆ. ಗುಂಡಿನ ದಾಳಿ ನಡೆದ ಸಂದರ್ಭಗಳ ಬಗ್ಗೆ ಹಲವು ಅನುಮಾನಗಳಿವೆ. ಪೊಲೀಸರು ಮಹಜರು ಪೂರ್ಣಗೊಳಿಸುವ ಮುನ್ನವೇ ಮೃತದೇಹಗಳನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದು ಆರೋಪಿಸಿದರು.
ಈ ಘಟನೆ ಕುರಿತು ಸ್ಥಳೀಯರು ನೀಡುತ್ತಿರುವ ಮಾಹಿತಿ ಮತ್ತು ಅರಣ್ಯಾಧಿಕಾರಿಗಳ ಹೇಳಿಕೆಗಳಲ್ಲಿ ವ್ಯತ್ಯಾಸವಿದೆ. ಹೀಗಾಗಿ ಇಲಾಖಾ ತನಿಖೆಯಿಂದ ಸತ್ಯ ಹೊರಬರಲು ಸಾಧ್ಯವಿಲ್ಲ. ನ್ಯಾಯಾಂಗ ತನಿಖೆಯೇ ಅಗತ್ಯ ಎಂದು ಒತ್ತಾಯಿಸಿದರು.
ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ತನಿಖೆ ಪೂರ್ಣಗೊಳ್ಳುವವರೆಗೆ ಕರ್ತವ್ಯದಿಂದ ದೂರವಿಡಬೇಕು. ಮೃತರ ಬಳಿ ಇದ್ದ ಶಸ್ತ್ರಾಸ್ತ್ರಗಳು, ಮಾಂಸ ಹಾಗೂ ಅವರ ಕ್ರಿಮಿನಲ್ ಹಿನ್ನೆಲೆಯ ಬಗ್ಗೆಯೂ ಸ್ಪಷ್ಟ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದರು.
ಮೃತರು ಚೀಲಗಳಲ್ಲಿ ಮಾಂಸ ಸಾಗಿಸುತ್ತಿದ್ದರು ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ, ಯಾವ ಮಾಂಸ ಪತ್ತೆಯಾಗಿದೆ, ಎಷ್ಟು ಶಸ್ತ್ರಾಸ್ತ್ರಗಳು ಇದ್ದವು ಎಂಬ ಬಗ್ಗೆ ಸರಿಯಾದ ಮಾಹಿತಿ ನೀಡಲಾಗಿಲ್ಲ. “ಮೂವರು ಏಕಾಏಕಿ ಬೇಟೆಗಾರರಾಗಿ ಅರಣ್ಯಾಧಿಕಾರಿಗಳ ಮೇಲೆ ಗುಂಡು ಹಾರಿಸಲು ಮುಂದಾಗಲು ಸಾಧ್ಯವೇ? ಅವರಿಗೆ ಈ ಹಿಂದೆ ಯಾವುದೇ ಅಪರಾಧ ಹಿನ್ನೆಲೆ ಇತ್ತು ಎಂದು ಯಾರೂ ಹೇಳಿಲ್ಲ ಎಂದು ಪ್ರಶ್ನಿಸಿದರು.
ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ, ಘಟನೆ ನಿಜವಾಗಿಯೂ ಎನ್‌ಕೌಂಟರ್ ಆಗಿತ್ತೇ ಮತ್ತು ಗುಂಡು ಹಾರಿಸುವ ಅಗತ್ಯವಿತ್ತೇ ಎಂಬುದನ್ನು ಜನರಿಗೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಈ ಘಟನೆ ಕುರಿತು ಸಚಿವರು ಸಭೆ ಕರೆದು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಅವರು ಈ ವಿಚಾರದಲ್ಲಿ ಆಸಕ್ತಿ ತೋರುತ್ತಿಲ್ಲ ಎಂದು ಅಶೋಕ್ ಆರೋಪಿಸಿದರು. “ಸಚಿವರು ಕೂಡಲೇ ಸ್ಥಳಕ್ಕೆ ತೆರಳಿ ಜನರ ಮುಂದೆಯೇ ಸತ್ಯವನ್ನು ತಿಳಿಸಬೇಕು. ಶೂಟೌಟ್ ಅಗತ್ಯವಿತ್ತೇ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಅವರು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



