ರಾಜಕೀಯ

RSS ಟೀಕಿಸುವ ಮೂಲಕ ಕಾಂಗ್ರೆಸ್‌ ನಾಯಕರು ಬಡ್ತಿ ಪಡೆಯುತ್ತಾರೆ: ಸಿ.ಟಿ ರವಿ; Video

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ನ್ನು ಕೋಮುವಾದ ಮತ್ತು ಜಾತೀಯತೆಯಿಂದ ಪ್ರೇರಿತವಾಗಿರುವ ‘ಸಾವಿರ ತಲೆಗಳ ವಿಷಪೂರಿತ ಹಾವು’ ಎಂದು ಟೀಕಿಸಿದ್ದರು.

RSS ಟೀಕಿಸುವ ಮೂಲಕ ಕಾಂಗ್ರೆಸ್‌ ನಾಯಕರು ಬಡ್ತಿ ಪಡೆಯುತ್ತಾರೆ: ಸಿ.ಟಿ ರವಿ; Video
ಸಿ ಟಿ ರವಿ
Published On :

ಆರ್‌ಎಸ್‌ಎಸ್‌ ವಿರುದ್ಧ ಟೀಕೆ ಮಾಡುವ ಮೂಲಕ ಕಾಂಗ್ರೆಸ್‌ ನಾಯಕರು ಬಡ್ತಿ ಪಡೆಯುತ್ತಾರೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಆರೋಪಿಸಿದ್ದಾರೆ. ಆರ್‌ಎಸ್‌ಎಸ್‌ ನ್ನು ‘ಸಾವಿರ ತಲೆಗಳ ವಿಷಪೂರಿತ ಹಾವು’ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನು ಅವರು ಖಂಡಿಸಿದ್ದಾರೆ.

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ನ್ನು ಕೋಮುವಾದ ಮತ್ತು ಜಾತೀಯತೆಯಿಂದ ಪ್ರೇರಿತವಾಗಿರುವ ‘ಸಾವಿರ ತಲೆಗಳ ವಿಷಪೂರಿತ ಹಾವು’ ಎಂದು ಟೀಕಿಸಿದ್ದರು.

ಆಗಸ್ಟ್ 15ರಂದು ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ ಯತೀಂದ್ರ ಈ ಹೇಳಿಕೆ ನೀಡಿದ್ದಾರೆ. ಅವರ ಭಾಷಣದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅಲ್ಲದೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರ‍್ಯಾಲಿ ಉದ್ದೇಶಿಸಿ ಮಾತನಾಡಿದ್ದ ಸ್ಥಳವನ್ನು ‘ಶುದ್ಧೀಕರಣ’ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಆರ್‌ಎಸ್‌ಎಸ್‌, ಬಿಜೆಪಿ ಹಾಗೂ ಶ್ರೀರಾಮಸೇನೆ ಸಾರ್ವಜನಿಕವಾಗಿ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.