ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ಯಾರು? ಮುನಿಯಪ್ಪ ಸಮಾಜ ಕಲ್ಯಾಣ ಖಾತೆ ಪಡೆದಿದ್ದು ಹೇಗೆ ಗೊತ್ತಾ: ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ; Video
ಆರಂಭದಲ್ಲಿ ನಾಲ್ಕೈದು ಜನರನ್ನು ಡಿಸಿಎಂ ಮಾಡುವ ಯೋಜನೆಯಿತ್ತು. ಆದರೆ, ಒಬ್ಬರಿಗಷ್ಟೇ ಡಿಸಿಎಂ ಹುದ್ದೆ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಿ ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿಸಿದ್ದು ನಾನೇ.

ಬೆಂಗಳೂರು: ಪರಮೇಶ್ವರ್ ಅವರನ್ನು ಉಪ ಮುಖ್ಯಮಂತ್ರಿ ಮಾಡಿದ್ದು ಯಾರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಗಾಂಧಿ ಭವನದಲ್ಲಿ ನಡೆದ ‘ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ’ದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಕಾರ್ಯಕ್ರಮದಲ್ಲಿ ಸಭಿಕರೊಬ್ಬರು ದಲಿತ ಸಿಎಂ ವಿಚಾರವನ್ನು ಪ್ರಸ್ತಾಪಿಸಿದರು. ಇದರಿಂದ ಕೊಂಚ ಭಾವೋದ್ವೇಗಕ್ಕೊಳಗಾದ ಸಿದ್ದರಾಮಯ್ಯ, ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ಯಾರು? ಆರಂಭದಲ್ಲಿ ನಾಲ್ಕೈದು ಜನರನ್ನು ಡಿಸಿಎಂ ಮಾಡುವ ಯೋಜನೆಯಿತ್ತು. ಆದರೆ, ಒಬ್ಬರಿಗಷ್ಟೇ ಡಿಸಿಎಂ ಹುದ್ದೆ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಿ ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿಸಿದ್ದು ನಾನೇ ಎಂದು ನೇರವಾಗಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಕಾರ್ಯಕ್ರಮಕ್ಕೆ ಇಬ್ಬರು ಮಂತ್ರಿಗಳನ್ನು ಆಹ್ವಾನಿಸಿದ್ದೆ, ಅವರಿಬ್ಬರು ಬಂದಿಲ್ಲ ಎಂದು ಕೊಂಚ ಗರಂ ಆದರು. ಇನ್ನೂ ಕೆ.ಎಚ್ ಮುನಿಯಪ್ಪ ಅವರ ಬಳಿ ಸಮಾಜ ಕಲ್ಯಾಣ ಖಾತೆಯಿದೆ, ಆದರೆ ಅದನ್ನು ಅವರು ಹೋರಾಟ ಮಾಡಿ ತೆಗೆದುಕೊಂಡಿದ್ದಾರೆ. ಅವರಿಗೆಲ್ಲಾ ಶಕ್ತಿ ತುಂಬುವ ಕೆಲಸ ಮಾಡಬೇಕು. ಯಾರಿಗೂ ಅನ್ಯಾಯ ಆಗಬಾರದು. ಎಲ್ಲರಿಗೂ ನ್ಯಾಯ ಸಿಗಬೇಕು ಎಂದರು.
ನೀವು ಪಾರ್ಲಿಮೆಂಟ್ ನಲ್ಲಿ ಮಾತನಾಡಬೇಕು, ಮುುಂದಿನ ಪ್ರಧಾನಿಯಾಗಬೇಕು ಎಂದು ಅಭಿಮಾನಿಯೊಬ್ಬರು ಹೇಳಿದ ಮಾತಿಗೆ ಉತ್ತರಿಸಿದ ಸಿದ್ದರಾಮಯ್ಯ ನಾನು ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ, ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



