'ಮಹಾರಾಜರ ಕಾಲದಲ್ಲಿ ಹೊಗಳು ಭಟ್ಟರು ಇರ್ತಿದ್ರು; ನಮ್ಮ ಸರ್ಕಾರಕ್ಕಾಗಿ ಕುಮಾರಣ್ಣನನ್ನು ಇಟ್ಟುಕೊಂಡಿದ್ದೇವೆ; ಹಗರಣ ಸಾಬೀತಾದ್ರೆ ರಾಜಕೀಯ ನಿವೃತ್ತಿ'
ನಾನು ತಪ್ಪು ಮಾಡಿದ್ದರೆ ಅವರ ಕಾಲು ಹಿಡಿಯುತ್ತೇನೆ. ಆದರೆ ತಪ್ಪೇ ಮಾಡದೆ ಏಕೆ ಕಾಲು ಹಿಡಿಯಬೇಕು? ಎಂದು ಪ್ರಶ್ನಿಸಿದ ಅವರು, ಕುಮಾರಸ್ವಾಮಿ ಆರೋಪ ಸಾಬೀತುಪಡಿಸದಿದ್ದರೆ ಅವರೇ ರಾಜಕೀಯದಿಂದ ನಿವೃತ್ತಿಯಾಗಬೇಕು ಎಂದರು.

ರಾಮನಗರ: ಗುತ್ತಿಗೆದಾರರೊಬ್ಬರ ₹600 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಾಲಕೃಷ್ಣ ಅವರು ನನ್ನ ಕಾಲಿಡಿಯಲು ಬಂದಿದ್ದರು ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಅಸಹ್ಯಕರವಾದುದು. ಅದರಲ್ಲಿ ನನ್ನ ತಪ್ಪಿರುವುದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುವೆ. ಇಲ್ಲದಿದ್ದರೆ ಅವರು ನಿವೃತ್ತಿ ಪಡೆಯುತ್ತಾರಾ?’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಬಾಲಕೃಷ್ಣ ಸವಾಲು ಹಾಕಿದರು.
ರಾಮನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಾನು ತಪ್ಪು ಮಾಡಿದ್ದರೆ ಅವರ ಕಾಲು ಹಿಡಿಯುತ್ತೇನೆ. ಆದರೆ ತಪ್ಪೇ ಮಾಡದೆ ಏಕೆ ಕಾಲು ಹಿಡಿಯಬೇಕು? ಎಂದು ಪ್ರಶ್ನಿಸಿದ ಅವರು, ಕುಮಾರಸ್ವಾಮಿ ಆರೋಪ ಸಾಬೀತುಪಡಿಸದಿದ್ದರೆ ಅವರೇ ರಾಜಕೀಯದಿಂದ ನಿವೃತ್ತಿಯಾಗಬೇಕು ಎಂದರು.
ಕುಮಾರಸ್ವಾಮಿ ಅವರು ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಬೇಕು. ಆಧಾರರಹಿತ ಆರೋಪ ಹಾಗೂ ಉಡಾಫೆ ಮಾತುಗಳನ್ನು ಜನರು ಕೇಳುವುದಿಲ್ಲ ಎಂದು ತಿಳಿಸಿದರು.
ನೈಸ್ ರಸ್ತೆ ವಿಚಾರವಾಗಿ ಜೆಡಿಎಸ್ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಬಾಲಕೃಷ್ಣ, ನೈಸ್ ರಸ್ತೆಗೂ ಸರ್ಕಾರಕ್ಕೂ ನೇರ ಸಂಬಂಧವಿಲ್ಲ ಎಂದರು.
ನೈಸ್ ವಿಚಾರದಲ್ಲಿ ಸರ್ಕಾರ ಸಬ್ ಕಮಿಟಿ ರಚಿಸಿದ್ದು, ಸಭೆ ಕರೆದ ಬಳಿಕ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗುವುದು. ನ್ಯಾಯಾಲಯದಲ್ಲಿ ಏನು ತೀರ್ಮಾನವಾಗಿದೆ ಎಂಬುದರ ಆದೇಶವನ್ನು ತೋರಿಸಲಿ ಎಂದು ಅವರು ಸವಾಲು ಹಾಕಿದರು.
ನೈಸ್ ಯೋಜನೆಯನ್ನು ರಾಜ್ಯಕ್ಕೆ ತಂದವರು ಸನ್ಮಾನ್ಯ ದೇವೇಗೌಡರು. ಅವರು ಅಂಕಿತ ಹಾಕಿದ ಕೂಸು ಇಂದು ಬೃಹದಾಕಾರವಾಗಿ ಬೆಳೆದಿದೆ. ಹೀಗಾಗಿ ಈ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಸಮಗ್ರ ಚರ್ಚೆ ನಡೆಯಬೇಕು ಎಂದರು.
ನಮ್ಮ ನಾಯಕ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದ ಬಳಿಕ ಕುಮಾರಸ್ವಾಮಿಗೆ ಹೊಟ್ಟೆ ತೊಳೆಸಿದಂತಾಗಿದೆ. ಅದಕ್ಕಾಗಿ, ನಿತ್ಯ ಒಬ್ಬೊಬ್ಬರ ಮೇಲೆ ಒಂದೊಂದು ಆರೋಪ ಮಾಡಿಕೊಂಡು ತಿರುಗುತ್ತಾರೆ. ಹಿಂದೆ ಮಹಾರಾಜರು ತೆಗಳುವುದಕ್ಕಾಗಿಯೇ ಕೆಲವರನ್ನು ನೇಮಿಸಿಕೊಳ್ಳುತ್ತಿದ್ದರು. ಅದೇ ರೀತಿ, ಕುಮಾರಸ್ವಾಮಿ ಅವರನ್ನು ನಾವು ನೇಮಿಸಿಕೊಂಡಿದ್ದೇವೆ ಎಂದು ವ್ಯಂಗ್ಯವಾಡಿದರು.
ಡಿ.ಕೆ. ಶಿವಕುಮಾರ್ ಅವರು ನೈಸ್ ರಸ್ತೆಯನ್ನು ವಶಕ್ಕೆ ಪಡೆಯುತ್ತಿದ್ದಾರೆ ಎಂಬ ಆರೋಪಕ್ಕೆ ಆಧಾರವೇನು ಎಂದು ಪ್ರಶ್ನಿಸಿದ ಅವರು, ಕೇಂದ್ರ ಸಚಿವರಾಗಿ ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಸಾಕಷ್ಟು ಕೆಲಸಗಳಿವೆ. ಅದನ್ನು ಬಿಟ್ಟು ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಟೀಕಿಸುವುದೇ ಕೆಲಸವಾಗಿದೆ ಎಂದು ವ್ಯಂಗ್ಯವಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



