ರಾಜಕೀಯ

ಕುಮಾರಸ್ವಾಮಿ ಟಾರ್ಗೆಟ್ BJP, ಕಾಂಗ್ರೆಸ್ ಅಲ್ಲ; ರಾಜ್ಯದಲ್ಲಿ ಕೇಸರಿ ಪಕ್ಷ ಇರಬಾರದೆಂದು ಹೋರಾಟ: CM ಡಿ.ಕೆ ಶಿವಕುಮಾರ್

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕುಮಾರಸ್ವಾಮಿ ತಮಗೆ ಬೇಕಾದ ಆರೋಪಗಳನ್ನು ಮಾಡಲು ಸ್ವತಂತ್ರರು. ಆದರೆ ಅವರ ಹೋರಾಟ ಬಿಜೆಪಿ ವಿರುದ್ಧ ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿ ಟಾರ್ಗೆಟ್ BJP, ಕಾಂಗ್ರೆಸ್ ಅಲ್ಲ; ರಾಜ್ಯದಲ್ಲಿ ಕೇಸರಿ ಪಕ್ಷ ಇರಬಾರದೆಂದು ಹೋರಾಟ: CM ಡಿ.ಕೆ ಶಿವಕುಮಾರ್
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ - ಸಿಎಂ ಡಿಕೆ ಶಿವಕುಮಾರ್
Published On :

ಬೆಂಗಳೂರು: ಕೆಪಿಎಸ್‌ಸಿ ಹಗರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಾಯಕ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತಿಲ್ಲ. ಅವರ ಟಾರ್ಗೆಟ್ ಬಿಜೆಪಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕುಮಾರಸ್ವಾಮಿ ತಮಗೆ ಬೇಕಾದ ಆರೋಪಗಳನ್ನು ಮಾಡಲು ಸ್ವತಂತ್ರರು. ಆದರೆ ಅವರ ಹೋರಾಟ ಬಿಜೆಪಿ ವಿರುದ್ಧ ಎಂದು ತಿರುಗೇಟು ನೀಡಿದರು.

"ಕುಮಾರಸ್ವಾಮಿ ನಮ್ಮ(ಕಾಂಗ್ರೆಸ್) ವಿರುದ್ಧ ಹೋರಾಡುತ್ತಿಲ್ಲ. ಅವರು ಬಿಜೆಪಿ ವಿರುದ್ಧ ಹೋರಾಡುತ್ತಿದ್ದಾರೆ. ಅವರು ತಮ್ಮ ಕರ್ತವ್ಯವನ್ನು ಮಾಡಲಿ. ಅವರು ಯಾವುದೇ ಆರೋಪಗಳನ್ನು ಮಾಡಲಿ. ಬಿಜೆಪಿ ಇನ್ನು ಮುಂದೆ ರಾಜ್ಯದಲ್ಲಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ನಡೆಸುತ್ತಿದ್ದಾರೆ ಎಂದರು.

ಇನ್ನು ಅಲ್ಲೋಲ ಕಲ್ಲೋಲವಾಗುವಂತಹ ದಾಖಲೆ ಬಿಡುಗಡೆ ಮಾಡುತ್ತೇನೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, "ಬಹಳ ಸಂತೋಷ" ಎಂದರು.

ಬಿಜೆಪಿಯ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯಿಸಿದ, ವಿರೋಧ "ಅವರು ಪಾದಯಾತ್ರೆ ಮಾಡಲಿ, ಆನಂತರ ನಮ್ಮದು ಯಾವ ಯಾತ್ರೆ ನಡೆಯುತ್ತದೆ ಎಂದು ಹೇಳುವೆ. ನಾವು ರಾಜಕಾರಣಿಗಳಲ್ಲವೇ? ಅವರು ಶುರು ಮಾಡಲಿ. ನಾವು ಅವರಿಗೆ ಗೌರವ ಕೊಟ್ಟು ಅಧಿವೇಶನ ನಡೆಸಿದ್ದವು. ಯಾವುದೇ ವಿಚಾರ ಚರ್ಚೆ ಮಾಡಲಿಲ್ಲ. ಈಗ ಕಸ್ತೂರಿ ರಂಗನ್ ವರದಿ ವಿಚಾರವಾಗಿ, ರೈತರ ಹಿತ ವಿಚಾರವಾಗಿ ಚರ್ಚೆ ಮಾಡುವುದಿದೆ. ಅದಕ್ಕಾಗಿ ಶಾಸಕರ ಅಭಿಪ್ರಾಯ ಕೇಳಲಾಗುವುದು" ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.