ರಾಜಕೀಯ

ನನಗೆ 80 ವರ್ಷ, ಎಷ್ಟು ದಿನ ಇರ್ತಿನೊ ಗೊತ್ತಿಲ್ಲ; ವ್ಯವಸ್ಥೆ ಸುಧಾರಣೆಯಾಗದೆ ನಾನು ಪ್ರಾಮಾಣಿಕ ಎಂದರೆ ಆತ್ಮವಂಚನೆಯಾಗುತ್ತೆ: ಸಿದ್ದರಾಮಯ್ಯ

ಈ ಹಿಂದೆ 1991ರಲ್ಲಿ ಕೊಪ್ಪಳದಿಂದ ಲೋಕಸಭೆಗೆ ನಿಂತಿದ್ದೆ. 10 ಸಾವಿರ ಮತಗಳಿಂದ ಸೋತಿದ್ದೆ. ಆಗ ರಾಮಕೃಷ್ಣ ಹೆಗಡೆಯವರು ಕೂಡ ಸೋತರು. ಆವತ್ತೆ ನಾನು ಲೋಕಸಭೆಗೆ ಮತ್ತೆ ನಿಲ್ಲಬಾರದು ಎಂದು ತೀರ್ಮಾನ ಮಾಡಿಬಿಟ್ಟೆ.

ನನಗೆ 80 ವರ್ಷ, ಎಷ್ಟು ದಿನ ಇರ್ತಿನೊ ಗೊತ್ತಿಲ್ಲ; ವ್ಯವಸ್ಥೆ ಸುಧಾರಣೆಯಾಗದೆ ನಾನು ಪ್ರಾಮಾಣಿಕ ಎಂದರೆ ಆತ್ಮವಂಚನೆಯಾಗುತ್ತೆ: ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ತುಮಕೂರು: ನನಗೆ ಈಗ 80 ವರ್ಷ, ಆರೋಗ್ಯವಾಗಿದ್ದೇನೆ. ಎಷ್ಟು ವರ್ಷ ಬದುಕಿರುತ್ತೇನೆ ಅಂತಾ ಗೊತ್ತಿಲ್ಲ. ಆದರೆ, ನಾನು‌ ಮುಂದಿನ‌ ಚುನಾವಣೆಗೆ ‌ನಿಲ್ಲಬಾರದೆಂದು ನಿರ್ಧರಿಸಿದ್ದೇನೆ, ಕಾರಣ ವಯಸ್ಸಾಯಿತು ಅಂತಲ್ಲ. ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ, ಬಹಳ ದುಬಾರಿಯಾಗಿದೆ ಎಂಬ ಕಾರಣಕ್ಕಾಗಿ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತುಮಕೂರಿನಲ್ಲಿ ಆಯೋಜಿಸಿದ್ದ ವೀರಣ್ಣನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ ಅವ್ರು ಇಂದಿನ ಚುನಾವಣೆ ವ್ಯವಸ್ಥೆ ಬಹಳ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ಅಭಿಪ್ರಾಯ ನನ್ನದು ಎಂದಿದ್ದಾರೆ. ಆದರೆ, ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ. ವ್ಯವಸ್ಥೆ ಸುಧಾರಣೆಯಾಗದೆ ನಾನು ಪ್ರಾಮಾಣಿಕ ಎಂದರೆ ಆತ್ಮವಂಚನೆಯಾಗುತ್ತದೆ ಎಂದರು.

ನನಗೆ ಲೋಕಸಭಾ ಚುನಾವಣೆಗೆ ನಿಲ್ಲಲು ಆಫರ್ ಬಂದಿತ್ತು, ತಿರಸ್ಕರಿಸಿದೆ. ಈ ಹಿಂದೆ 1991ರಲ್ಲಿ ಕೊಪ್ಪಳದಿಂದ ಲೋಕಸಭೆಗೆ ನಿಂತಿದ್ದೆ. 10 ಸಾವಿರ ಮತಗಳಿಂದ ಸೋತಿದ್ದೆ. ಆಗ ರಾಮಕೃಷ್ಣ ಹೆಗಡೆಯವರು ಕೂಡ ಸೋತರು. ಆವತ್ತೆ ನಾನು ಲೋಕಸಭೆಗೆ ಮತ್ತೆ ನಿಲ್ಲಬಾರದು ಎಂದು ತೀರ್ಮಾನ ಮಾಡಿಬಿಟ್ಟೆ. ಇನ್ನು ಮುಂದೆ ಲೋಕಸಭೆಗೂ ನಿಲ್ಲೊಲ್ಲ, ವಿಧಾನಸಭೆಗೂ ನಿಲ್ಲೊಲ್ಲ ಎಂದರು.

ಚುನಾವಣೆಯಲ್ಲಿ ಚುನಾವಣಾ ಆಯೋಗದವರು ಹೇಳಿದಷ್ಟು ಹಣ ಮಾತ್ರ ಖರ್ಚು ಮಾಡಬೇಕು. ಆದರೆ, ಅದು ಆಗುತ್ತಿಲ್ಲ. 1983ರ ಚುನಾವಣೆಗೂ, 2023ರ ಚುನಾವಣೆಗೂ ಬಹಳಷ್ಟು ವ್ಯತ್ಯಾಸವಿದೆ. ಚುನಾವಣೆಯಲ್ಲಿ ಅಕ್ರಮವಾಗಿ ಹಣ ಖರ್ಚು ಮಾಡದಂತೆ ಹೋರಾಟ ಮಾಡಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.