ರಾಜಕೀಯ

ವಿಧಾನಸಭೆಯಲ್ಲಿ ಪೆನ್​ಡ್ರೈವ್​ ಹಿಡಿದು ಗುಡುಗಿದ ಆರ್ ಅಶೋಕ್;​ ತಿಮ್ಮಾಪುರ ರಾಜೀನಾಮೆಗೆ ಆಗ್ರಹ

ರಾಜ್ಯ ಅಬಕಾರಿ ಇಲಾಖೆ ಭ್ರಷ್ಟಾಚಾರದಲ್ಲಿ ಮುಂಚೂಣಿಯಲ್ಲಿದ್ದು, ತಿಮ್ಮಾಪುರ ಅವರಿಗೆ ಪಾಲು ಕೊಡಬೇಕೆಂಬ ಆಡಿಯೋ ವೈರಲ್ ಆಗಿದೆ.

ವಿಧಾನಸಭೆಯಲ್ಲಿ ಪೆನ್​ಡ್ರೈವ್​ ಹಿಡಿದು ಗುಡುಗಿದ ಆರ್ ಅಶೋಕ್;​ ತಿಮ್ಮಾಪುರ ರಾಜೀನಾಮೆಗೆ ಆಗ್ರಹ
ವಿಧಾನಸಭೆಯಲ್ಲಿ ಆರ್ ಅಶೋಕ್
Published On :

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಭಾರತೀಯ ಜನತಾ ಪಕ್ಷ ಮಂಗಳವಾರ ಆರೋಪಿಸಿದ್ದು, ಈ ಸಂಬಂಧ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸಿದೆ.

ಇಂದು ವಿಧಾನಸಭೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, “ಅಬಕಾರಿ ಇಲಾಖೆಯಲ್ಲಿ, ಪರವಾನಗಿ ನೀಡಲು ಮತ್ತು ವರ್ಗಾವಣೆಯನ್ನು ಸುಗಮಗೊಳಿಸಲು ಲಂಚ ಪಡೆಯಲಾಗುತ್ತಿದೆ. ಇದಕ್ಕೆ ಸಂಬಂಧಿಸಿದ ಆಡಿಯೋ ರೆಕಾರ್ಡಿಂಗ್‌ಗಳನ್ನು ಬಿಡುಗಡೆ ಮಾಡಲಾಗಿದೆ ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಆದ್ದರಿಂದ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಕ್ಷಣವೇ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

ರಾಜ್ಯ ಅಬಕಾರಿ ಇಲಾಖೆ ಭ್ರಷ್ಟಾಚಾರದಲ್ಲಿ ಮುಂಚೂಣಿಯಲ್ಲಿದ್ದು, ತಿಮ್ಮಾಪುರ ಅವರಿಗೆ ಪಾಲು ಕೊಡಬೇಕೆಂಬ ಆಡಿಯೋ ವೈರಲ್ ಆಗಿದೆ. ಆ ಆಡಿಯೋ ದಾಖಲೆ ಈ ಪೆನ್‌ಡ್ರೈವ್‌ನಲ್ಲಿದೆ ಎಂದು ಆರ್ ಅಶೋಕ್​, ಸದನಕ್ಕೆ ಪೆನ್​ಡ್ರೈವ್ ತೋರಿಸಿದರು.

ನನ್ನ ಬಳಿ ಆ ಆಡಿಯೋದ ಪೆನ‌್‌ಡ್ರೈವ್ ಇದೆ. ಇಷ್ಟಿದ್ರೂ ನಾನವನಲ್ಲ ಅಂತ ಸಚಿವರು ಹೇಳುತ್ತಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಪ್ರತಿ ತಿಂಗಳು ಒಂದೊಂದು ಅಂಗಡಿಯಿಂದ 10-15 ಸಾವಿರ ರೂ ಕಲೆಕ್ಷನ್ ಮಾಡಲಾಗ್ತಿದೆ. ಸರಾಸರಿ ಒಂದು ತಿಂಗಳಿ 21 ಕೋಟಿಯಂತೆ ವರ್ಷಕ್ಕೆ 252 ಕೋಟಿ ಕಲೆಕ್ಷನ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಭ್ರಷ್ಟಾಚಾರದ ಕೂಪಕ್ಕೆ A1 ಇಲಾಖೆ ಅಂದರೆ ಅಬಕಾರಿ ಇಲಾಖೆ. ದಿನಕ್ಕೊಂದು ವಿಡಿಯೋ ಆಡಿಯೋ ಬರುತ್ತಿದೆ. ಆದರೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮೌನ ಮೂರ್ತಿ ಆಗಿದ್ದಾರೆ ಎಂದು ಆಶೋಕ್​ ವಾಗ್ದಾಳಿ ನಡೆಸಿದರು.

ವಿಬಿ-ಜಿ ರಾಮ್ ಜಿ ಯೋಜನೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ನಾಯಕರು, ಮಹಾತ್ಮ ಗಾಂಧಿಯವರ ಆದರ್ಶಗಳ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ಗಾಂಧಿಯವರ ಆದರ್ಶಗಳನ್ನು ಪಾಲಿಸುತ್ತಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.