ಮುಂದಿನ ವಿಧಾನಸಭಾ ಚುನಾವಣೆಯಲ್ಲಿ BJP-JDS ಮೈತ್ರಿಕೂಟ ಸರ್ಕಾರ ರಚನೆ: ಬಿ.ಎಸ್ ಯಡಿಯೂರಪ್ಪ
ಮೈತ್ರಿ ಕುರಿತು ಈಗಾಗಲೇ ನವದೆಹಲಿಯಲ್ಲಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಬಳಿ ಮಾತನಾಡಿ ಆಗಿದೆ ಎಂದು ಹೇಳಿದರು.

ತುಮಕೂರು: ವಿಧಾನಸಭೆಯ ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯಲಿದೆ. ಮೈತ್ರಿ ಅನಿವಾರ್ಯವಾಗಿದೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೈತ್ರಿ ಕುರಿತು ಈಗಾಗಲೇ ನವದೆಹಲಿಯಲ್ಲಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಬಳಿ ಮಾತನಾಡಿ ಆಗಿದೆ ಎಂದು ಹೇಳಿದರು.
ಮೆಟ್ರೊ ಪ್ರಯಾಣ ದರ ಹೆಚ್ಚಳ ಸರಿಯಲ್ಲ. ಈಗಾಗಲೇ ಜನಸಾಮಾನ್ಯರು ಬದುಕುವುದು ಕಷ್ಟಕರವಾಗಿದೆ. ಹೆಚ್ಚಿಸಿರುವ ದರವನ್ನು ತಕ್ಷಣ ವಾಪಸ್ ಪಡೆಯಬೇಕುಎಂದು ಆಗ್ರಹಿಸಿದರು.
ರಾಜ್ಯದ ಜನರು ಬದಲಾವಣೆ ಬಯಸುತ್ತಿದ್ದಾರೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿ(ಎಸ್) ಮೈತ್ರಿಕೂಟ ಗೆದ್ದು ಸರ್ಕಾರ ರಚಿಸುತ್ತದೆ ಎಂದು ಯಡಿಯೂರಪ್ಪ ಹೇಳಿದರು. ನಮ್ಮ ಮೆಟ್ರೋ ದರ ಏರಿಕೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ ಯಡಿಯೂರಪ್ಪ, "ಜನರು ವಿವಿಧ ಸರಕುಗಳ ಬೆಲೆ ಏರಿಕೆಯನ್ನು ನಿಭಾಯಿಸಲು ಹೆಣಗಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



