ಹೈಕಮಾಂಡ್ ಹೇಳಿದರೆ ಡಿಕೆಶಿ ಸಿಎಂ ಆಗ್ತಾರೆ, ಇಲ್ಲದಿದ್ದರೆ ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ: ಡಾ ಯತೀಂದ್ರ
ನಿನ್ನೆ ಮೈಸೂರಿನಲ್ಲಿ ಮಾತನಾಡುವ ವೇಳೆ ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಿಲ್ಲ, ತಂದೆಯರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ನಾನು ಅಂದುಕೊಳ್ಳುತ್ತೇನೆ ಎಂದಿದ್ದರು.

ಬೀದರ್: ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ನಿನ್ನೆ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ, ಹಾಗಾಗಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಾನು ಹೇಳಿದ್ದು ಎಂದು ಡಾ ಯತೀಂದ್ರ ಸಿದ್ದರಾಮಯ್ಯ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ನಿನ್ನೆ ಮೈಸೂರಿನಲ್ಲಿ ಮಾತನಾಡುವ ವೇಳೆ ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಿಲ್ಲ, ತಂದೆಯರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ನಾನು ಅಂದುಕೊಳ್ಳುತ್ತೇನೆ ಎಂದಿದ್ದರು. ಅದಕ್ಕೆ ಡಿ ಕೆ ಶಿವಕುಮಾರ್ ಯತೀಂದ್ರ ಅವರು ಹೇಳಿದ ಮೇಲೆ ಮುಗೀತು, ಅವರೇ ಹೈಕಮಾಂಡ್ ಎಂದು ಭಾವಿಸೋಣ ಎಂದಿದ್ದರು.
ಈ ಬಗ್ಗೆ ಇಂದು ಬೀದರ್ ನಲ್ಲಿ ಸುದ್ದಿಗಾರರು ಕೇಳಿದಾಗ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ. ಎಲ್ಲಾ ಪಕ್ಷಗಳಲ್ಲಿಯೂ ಮುಖ್ಯಮಂತ್ರಿ ಆಕಾಂಕ್ಷಿಗಳು ಇರುತ್ತಾರೆ. ನಿಜವಾದ ಅರ್ಹತೆ ಇರುವವರು ಸಹ ಕೇಳುತ್ತಿರುತ್ತಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ, ನಮ್ಮ ಪಕ್ಷದಲ್ಲೇನೂ ಹೊಸ ವಿಚಾರವಲ್ಲ, ಹೈಕಮಾಂಡ್ ಸದ್ಯಕ್ಕೆ ಏನೂ ಹೇಳಿಲ್ಲ,ಹೀಗಾಗಿ ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



