ಜನರ ಹಿತಾಸಕ್ತಿ ಬದಿಗಿಟ್ಟು ದರ ಏರಿಕೆಗೆ ಮುಂದಾಗಿರುವ ಸರ್ಕಾರ ಹಠಮಾರಿ ಧೋರಣೆ ಬಿಟ್ಟು ಹೊಸ FFC ರಚಿಸಲಿ..!
ಜನರ ಹಿತಾಸಕ್ತಿಯನ್ನು ಬದಿಗಿಟ್ಟು ದರ ಏರಿಕೆಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ, ತನ್ನ ಹಠಮಾರಿ ಧೋರಣೆ ಬಿಟ್ಟು ಹೊಸ ಎಫ್‌ಎಫ್‌ಸಿ (Fare Fixation Committee) ರಚಿಸುವ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಬೇಕು.

ಬೆಂಗಳೂರು: ಜನರ ಹಿತಾಸಕ್ತಿಯನ್ನು ಬದಿಗಿಟ್ಟು ದರ ಏರಿಕೆಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ, ತನ್ನ ಹಠಮಾರಿ ಧೋರಣೆ ಬಿಟ್ಟು ಹೊಸ ಎಫ್‌ಎಫ್‌ಸಿ ರಚಿಸುವ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ನಮ್ಮ ಮೆಟ್ರೋ ದರ ಏರಿಕೆ ಕುರಿತು ಜನರ ಮನವಿಗೆ ತ್ವರಿತವಾಗಿ ಸ್ಪಂದಿಸಿ, ತಾತ್ಕಾಲಿಕ ತಡೆ ನೀಡಿರುವ ಕೇಂದ್ರ ಸಚಿವರು ಹಾಗೂ ಅಧಿಕಾರಿಗರಿಗಳಿಗೆ ರಾಜ್ಯದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಬೆಂಗಳೂರು ಮೆಟ್ರೋ ದರವನ್ನು ಅಸಮರ್ಥನೀಯವಾಗಿ ಏರಿಕೆ ಮಾಡಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಸಂಬಂಧಪಟ್ಟಂತೆ ಇಂದು ನಾನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾದ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ದೂರವಾಣಿ ಮೂಲಕ ಸುದೀರ್ಘವಾಗಿ ಚರ್ಚೆ ನಡೆಸಿದೆ.
ಈಗಾಗಲೇ ಭಾರತದಲ್ಲೇ ಅತ್ಯಂತ ದುಬಾರಿ ಮೆಟ್ರೋ ದರವನ್ನು ಹೊಂದಿರುವ ಬೆಂಗಳೂರಿನಲ್ಲಿ, ಮತ್ತೊಂದು ದರ ಏರಿಕೆಯು ಲಕ್ಷಾಂತರ ನಾಗರಿಕರಿಗೆ ಹಾಗೂ ಸಾರ್ವಜನಿಕ ಸಾರಿಗೆಯನ್ನೇ ನಂಬಿಕೊಂಡಿರುವ ಸಾಮಾನ್ಯ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಎಂದು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ನನ್ನ ಮನವಿಗೆ ಅತ್ಯಂತ ತ್ವರಿತವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಸೋಮವಾರದಿಂದ ಜಾರಿಗೆ ಬರಬೇಕಿದ್ದ ಪ್ರಸ್ತಾವಿತ ದರ ಏರಿಕೆಯನ್ನು ಸದ್ಯಕ್ಕೆ ತಡೆಹಿಡಿಯಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದರ ಜೊತೆಗೆ ದರ ನಿಗದಿ ಸಮಿತಿಯಲ್ಲಿನ ಲೋಪದೋಷಗಳ ಬಗ್ಗೆ ವೈಯಕ್ತಿಕವಾಗಿ ಪರಿಶೀಲಿಸುವುದಾಗಿ ಭರವಸೆ ನೀಡಿರುವ ಅವರು, ರಾಜ್ಯ ಸರ್ಕಾರ ವಿನಂತಿಸಿದರೆ ದರಗಳ ವೈಜ್ಞಾನಿಕ ಪರಿಷ್ಕರಣೆಗಾಗಿ ಹೊಸ ಸಮಿತಿಯನ್ನು ರಚಿಸುವ ಬಗ್ಗೆಯೂ ಸಕಾರಾತ್ಮಕವಾಗಿ ಮಾತನಾಡಿದರು. ಪ್ರಯಾಣಿಕರ ಹಿತದೃಷ್ಟಿಯಿಂದ ಕೂಡಲೇ ಕಾರ್ಯಪ್ರವೃತ್ತರಾದ ಕೇಂದ್ರ ಸಚಿವರಿಗೆ ನಾನು ರಾಜ್ಯದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆಂದು ಹೇಳಿದ್ದಾರೆ.
ಈಗ ಪ್ರಶ್ನೆ ಇರುವುದು ರಾಜ್ಯ ಸರ್ಕಾರದ ಮುಂದೆ. ಜನರ ಹಿತಾಸಕ್ತಿಯನ್ನು ಬದಿಗಿಟ್ಟು ದರ ಏರಿಕೆಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ, ತನ್ನ ಹಠಮಾರಿ ಧೋರಣೆ ಬಿಟ್ಟು ಹೊಸ ಎಫ್‌ಎಫ್‌ಸಿ (Fare Fixation Committee) ರಚಿಸುವ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ ಮೆಟ್ರೋ ಪ್ರಯಾಣವು ಪ್ರತಿಯೊಬ್ಬ ಸಾಮಾನ್ಯ ನಾಗರಿಕನಿಗೂ ಕೈಗೆಟುಕುವ ದರದಲ್ಲಿ ಸಿಗುವವರೆಗೂ ಮತ್ತು ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವವರೆಗೂ ನಮ್ಮ ಈ ಹೋರಾಟ ಮುಂದುವರಿಯಲಿದೆ ಎಂದೂ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



