ಸಿಎಂ ಸಿದ್ದರಾಮಯ್ಯ ನಿಷ್ಠಾವಂತ 25 ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವುದೇಕೆ?: ರಾಜಕೀಯ ವಲಯದಲ್ಲಿ ತೀವ್ರ ಸಂಚಲನ
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾರ್ವಜನಿಕರಲ್ಲಿ ಅಸಮಾಧಾನ ಹೆಚ್ಚುತ್ತಿರುವ ಸಂದರ್ಭದಲ್ಲಿ, ರಾಜ್ಯ ಸರ್ಕಾರದ ವೆಚ್ಚದಲ್ಲಿ ನಡೆಯುವ ಶಾಸಕರ ಈ ವಿದೇಶಿ ಪ್ರವಾಸ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡುವಿನ ಮುಂದುವರಿದಿರುವ ಅಧಿಕಾರ ಪೈಪೋಟಿಯ ನಡುವೆ, ಮುಖ್ಯಮಂತ್ರಿಗೆ ನಿಷ್ಠರಾಗಿದ್ದಾರೆಂದು ಹೇಳಲಾಗುತ್ತಿರುವ ಕಾಂಗ್ರೆಸ್‌ನ 25 ಶಾಸಕರು ಫೆಬ್ರವರಿ 18ರಿಂದ ಮಾರ್ಚ್ 3ರವರೆಗೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್‌ಗೆ ಅಧಿಕೃತ ಅಧ್ಯಯನ ಪ್ರವಾಸಕ್ಕೆ ತೆರಳಲು ಸಿದ್ಧರಾಗಿದ್ದಾರೆ.
ಪ್ರವಾಸದ ನೇತೃತ್ವವನ್ನು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ನೇತೃತ್ವ ವಹಿಸಿದ್ದಾರೆ. ಇದರಲ್ಲಿ ಸಿ. ಪುಟ್ಟರಂಗ ಶೆಟ್ಟಿ, ರಾಘವೇಂದ್ರ ಹಿಟ್ನಾಳ್, ಹೆಚ್.ಡಿ. ತಮ್ಮಯ್ಯ, ಹಂಪನಗೌಡ ಬದರ್ಲಿ, ಬಿ. ದೇವೇಂದ್ರಪ್ಪ, ಬಿ.ಎಂ. ನಾಗರಾಜ, ಯಶವಂತರಾಯಗೌಡ ಪಾಟೀಲ, ಜೆ.ಟಿ. ಪಾಟೀಲ, ಅಲ್ಲಮಪ್ರಭು ಪಾಟೀಲ, ಬಸವನಗೌಡ ದದ್ದಲ್, ಎ.ಆರ್. ಕೃಷ್ಣಮೂರ್ತಿ, ಎನ್.ಹೆಚ್. ಕೋನರೆಡ್ಡಿ ಮತ್ತು ಬಸನಗೌಡ ತುರವಿಹಾಳ್ ಸೇರಿದಂತೆ ಹಲವರು ಇದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾರ್ವಜನಿಕರಲ್ಲಿ ಅಸಮಾಧಾನ ಹೆಚ್ಚುತ್ತಿರುವ ಸಂದರ್ಭದಲ್ಲಿ, ರಾಜ್ಯ ಸರ್ಕಾರದ ವೆಚ್ಚದಲ್ಲಿ ನಡೆಯುವ ಶಾಸಕರ ಈ ವಿದೇಶಿ ಪ್ರವಾಸ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿ ಇದು ಖಾಸಗಿ ಪ್ರವಾಸವಾಗಿದ್ದು, ಇದರ ವೆಚ್ಚವನ್ನು ಸರ್ಕಾರ ಭರಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದರೂ, ಶಾಸಕರು ಈ ಭೇಟಿ ಪಶುಸಂಗೋಪನಾ ಇಲಾಖೆಯ ಮೂಲಕ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭವಾಗುವ ಮೊದಲು ಪ್ರವಾಸಕ್ಕೆ ಹೋಗಿ ಭಾರತಕ್ಕೆ ಮರಳುವ ನಿರೀಕ್ಷೆಯಿದೆ.
ಶಾಸಕರು ತಮ್ಮದೇ ವ್ಯವಸ್ಥೆಯಲ್ಲಿ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ. ಅವರನ್ನು ಹೋಗಬೇಡಿ ಎಂದು ನಾನು ಹೇಳಬಹುದೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರು ಕೇಳಿದಾಗ ಉತ್ತರಿಸಿದ್ದಾರೆ.
ಪ್ರವಾಸವನ್ನು ದೃಢಪಡಿಸಿದ ಕಾಂಗ್ರೆಸ್ ಶಾಸಕ ಪುಟ್ಟರಂಗ ಶೆಟ್ಟಿ, ಪಶುಸಂಗೋಪನಾ ಇಲಾಖೆಯ ವ್ಯವಸ್ಥೆಯಲ್ಲಿ ನಾವು ಅಧ್ಯಯನ ಪ್ರವಾಸಕ್ಕಾಗಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್‌ಗೆ ತೆರಳುತ್ತಿದ್ದೇವೆ. ಸಚಿವ ವೆಂಕಟೇಶ್ ನಮ್ಮನ್ನೆಲ್ಲ ಕರೆದುಕೊಂಡು ಹೋಗುತ್ತಿದ್ದಾರೆ. ಬಜೆಟ್ ಅಧಿವೇಶನ ಆರಂಭಕ್ಕೂ ಮೊದಲು ನಾವು ಹಿಂದಿರುಗುತ್ತೇವೆ ಎಂದು ಹೇಳಿದರು.
ವಿದೇಶ ಪ್ರವಾಸಕ್ಕೆ ತೆರಳಲು ಆಯ್ಕೆಯಾದ ಪ್ರತಿನಿಧಿಗಳಿಗೆ ಕಡ್ಡಾಯವಾಗಿರುವ ‘ನೋ ಒಬ್ಜೆಕ್ಷನ್ ಸರ್ಟಿಫಿಕೆಟ್’ (NOC) ನೀಡುವಂತೆ ಶಾಸಕರು ಕಾರ್ಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಪಾಳಯಗಳು ತಮ್ಮ ತಮ್ಮ ಬೆಂಬಲಿಗರನ್ನು ಒಟ್ಟುಗೂಡಿಸಿಕೊಳ್ಳಲು ‘ರೆಸಾರ್ಟ್ ರಾಜಕೀಯ’ಕ್ಕೆ ಮುಂದಾಗಬಹುದು ಎಂಬ ಊಹಾಪೋಹಗಳ ನಡುವೆಯೇ, ಮುಖ್ಯಮಂತ್ರಿಗಳ ಪಾಳಯಕ್ಕೆ ಸೇರಿದ್ದಾರೆಂದು ಗುರುತಿಸಲಾದ ಹೆಚ್ಚಿನ ಸಂಖ್ಯೆಯ ಶಾಸಕರು ವಿದೇಶಕ್ಕೆ ತೆರಳುತ್ತಿರುವುದು ರಾಜಕೀಯ ವಲಯದಲ್ಲಿ ಗಮನಸೆಳೆಯುತ್ತಿದೆ.
ಇದರ ಮಧ್ಯೆ, ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ 2023ರ ವಿಧಾನಸಭೆ ಚುನಾವಣೆಯ ಗೆಲುವಿನ ಬಳಿಕ ಒಪ್ಪಿಕೊಂಡಿದ್ದ ‘ರಹಸ್ಯ’ ಅಧಿಕಾರ ಹಂಚಿಕೆ ಒಪ್ಪಂದವನ್ನು ನೆನಪಿಸಿದ ನಂತರ, ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




