ಮೈತ್ರಿ ಚರ್ಚೆ ನಾಲ್ಕು ಗೋಡೆ ನಡುವೆ ಇರಬೇಕು; JDS ಸೈದ್ಧಾಂತಿಕವಾಗಿ ರಾಜಿಯಾಗಿಲ್ಲ, ಸೆಕ್ಯೂಲರಿಸಂ ನಮ್ಮ ಹೃದಯದಲ್ಲಿದೆ: ನಿಖಿಲ್ ಕುಮಾರಸ್ವಾಮಿ
ಕೆಲ ಬಿಜೆಪಿಗರಿಂದ ಮೈತ್ರಿ ಮುರಿಯುವ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ, ನಾವು ಮೈತ್ರಿ ಧರ್ಮವನ್ನು ಅತ್ಯಂತ ಗೌರವದಿಂದ ಪಾಲಿಸುತ್ತಿದ್ದೇವೆ. ನಮ್ಮ ಮೈತ್ರಿಗೆ ಬಿಜೆಪಿ ಹೈಕಮಾಂಡ್ ನಾಯಕರ ಮಾರ್ಗದರ್ಶನ ಇ

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಚರ್ಚೆ ನಾಲ್ಕು ಗೋಡೆಗಳ ನಡುವೆ ಇರಬೇಕೇ ಹೊರತು ಹಾದಿ-ಬೀದಿಯಲ್ಲಿ ಚರ್ಚೆ ಆಗಬಾರದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ವಿಚಾರಗಳು ನಾಲ್ಕು ಗೋಡೆಗಳ ಒಳಗೆ ಚರ್ಚೆಯಾಗಬೇಕು. ಹಾದಿ ಬೀದಿಯಲ್ಲಿ ಚರ್ಚಿಸಿ ಇತ್ಯರ್ಥವಾಗಬಾರದು . ಲೋಕಸಭಾ ಚುನಾವಣೆಯಿಂದಲೂ ಎರಡೂ ಪಕ್ಷಗಳ ಮೈತ್ರಿ ಇದೆ. ಅಂದಿನಿಂದಲೂ ನಮ್ಮನ್ನು ಗೌರವದಿಂದ ನೋಡಿಕೊಂಡಿದ್ದಾರೆ ಎಂದರು.
ಕೆಲ ಬಿಜೆಪಿಗರಿಂದ ಮೈತ್ರಿ ಮುರಿಯುವ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ, ನಾವು ಮೈತ್ರಿ ಧರ್ಮವನ್ನು ಅತ್ಯಂತ ಗೌರವದಿಂದ ಪಾಲಿಸುತ್ತಿದ್ದೇವೆ. ನಮ್ಮ ಮೈತ್ರಿಗೆ ಬಿಜೆಪಿ ಹೈಕಮಾಂಡ್ ನಾಯಕರ ಮಾರ್ಗದರ್ಶನ ಇದೆ. ಬಿಜೆಪಿ ಆಥವಾ ಜೆಡಿಎಸ್‌ನ ಯಾರೇ ಆಗಿರಲಿ ಹೊರಗೆ ಮಾತನಾಡಬಾರದು. ಎರಡು ಜಿಲ್ಲೆಗಳಲ್ಲಿ ಮೈತ್ರಿ ವಿಚಾರದ ಸಮಸ್ಯೆ ಉದ್ಭವವಾಗಿದೆ. ಅಲ್ಲಿನ ಮೂರ್ನಾಲ್ಕು ಜನ ಪ್ರಚಾರಕ್ಕೆ ಮಾತನಾಡಿದ್ದಾರೆ ಎಂದರು.
ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಎನ್ನುವುದಕ್ಕಿಂತ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲಲಿದೆ. ನಾವು ಮೈತ್ರಿ ಧರ್ಮ ಪಾಲಿಸುತ್ತೇವೆ. ಲೋಕಸಭೆ ಗೆದ್ದಂತೆ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ದಾಖಲೆ ಸೃಷ್ಟಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆ.ಆರ್.ಪೇಟೆಯಲ್ಲಿ ನಾನು ನೀಡಿದ ಹೇಳಿಕೆಯನ್ನು ತಿರುಚಲಾಗಿದೆ, ನೀವು ಈಗಾಗಲೇ ಶಾಸಕರಾಗಿದ್ದೀರಿ. ಮತ್ತೆ ಆರಿಸಿ ಬರುವುದಕ್ಕೆ ಜನರ ಪ್ರೀತಿ ವಿಶ್ವಾಸ ಗಳಿಸಿ ಮಂಜಣ್ಣ ಅಂತ ಹೇಳಿದ್ದೆ.ಅಭ್ಯರ್ಥಿಗಳ ಘೋಷಿಸಲು ನಾನು ಯಾರು? ನಾನು ಜನರ ವಿಶ್ವಾಸ ಉಳಿಸಿಕೊಂಡು ಹೋಗಿ ಅಂತ ಹೇಳುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು.
ಇನ್ನೂ ಇದಕ್ಕೂ ಮುನ್ನ ವಿಜಯಪುರದಲ್ಲಿ ಮಾತನಾಡಿದ್ದ ನಿಖಿಲ್ ಕುಮಾರಸ್ವಾಮಿ ಮೈತ್ರಿಯ ವಿಮಾನ ಹತ್ತಿದ್ದೇವೆ. ಅದು ಟಬ್ರ್ಯೂಲೆನ್ಸ್ ಆಗುವುದು ಸಹಜ. ಮಧ್ಯದಲ್ಲಿ ಕೆಲವು ಪ್ರಯಾಣಿಕರು ಇಳಿಯುವಂತೆ ಹೇಳಿದರೆ ಅದು ಸಾಧ್ಯವಾಗದು. ಇನ್ನೂ ಜೆಡಿಎಸ್ ಸೈದ್ಧಾಂತಿಕವಾಗಿ ರಾಜಿಯಾಗಿಲ್ಲ. ಸೆಕ್ಯೂಲರಿಸಂ ನಮ್ಮ ಹೃದಯಲ್ಲಿದೆ ಎಂದರು. ಕೆಲವೊಂದು ಅಸಮಾಧಾನ ಬರಬಹುದು ಅದನ್ನು ವರಿಷ್ಠರು ಸಮಾಧಾನ ಮಾಡುತ್ತಾರೆ. ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇದ್ದರೂ ಸಹ ಅದನ್ನು ಅವರು ಸರಿ ಪಡಿಸುತ್ತಾರೆ ಎಂದರು. ಸೈದ್ಧಾಂತಿಕವಾಗಿ ನಾವು ಎಂದೂ ಬದಲಾಗಿಲ್ಲ, ಬಿಜೆಪಿ ಜೊತೆ ಕೈ ಜೋಡಿಸಿದ ಮಾತ್ರಕ್ಕೆ ಸೆಕ್ಯೂಲರಿಸಂ ಕೈ ಬಿಟ್ಟಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



