ರಾಜಕೀಯ

'ಅಬ್ ಕಿ ಬಾರ್ ಟ್ರಂಪ್ ಸೇ ಹಾರ್': ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ; BJP ಸಿಡಿಮಿಡಿ

ಕಾಂಗ್ರೆಸ್ ತನ್ನ ಆಡಳಿತ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದೆ.

'ಅಬ್ ಕಿ ಬಾರ್ ಟ್ರಂಪ್ ಸೇ ಹಾರ್': ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ; BJP ಸಿಡಿಮಿಡಿ
ಬಿಜೆಪಿ — online desk
Published On :

ಬೆಂಗಳೂರು: ಭಾರತ–ಅಮೆರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತಾಗಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ನೀಡಿದ “ಅಬ್ಕಿ ಬಾರ್ ಟ್ರಂಪ್ ಸೇ ಹಾರ್” ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ಪ್ರತಿಪಕ್ಷಗಳು ಸೂಕ್ಷ್ಮವಾಗಿರುವ ಆರ್ಥಿಕ ಸಮಸ್ಯೆಯನ್ನು ಕ್ಷುಲ್ಲಕಗೊಳಿಸುತ್ತಿವೆ. ಭಾರತ–ಅಮೆರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ನಿರಾಶೆಯಿಂದ ಟೀಕೆ ಮಾಡುತ್ತಿವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಆರೋಪಗಳನ್ನು “ಆಧಾರರಹಿತ ಮತ್ತು ರಾಜಕೀಯ ಪ್ರೇರಿತ” ಎಂದು ತಿರಸ್ಕರಿಸಿರುವ ಬೊಮ್ಮಾಯಿಯವರು, ಕಾಂಗ್ರೆಸ್ ತನ್ನ ಆಡಳಿತ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಈ ಒಪ್ಪಂದದಿಂದ ಭಾರತದ ವ್ಯಾಪಾರ ವ್ಯಾಪ್ತಿ ವಿಸ್ತಾರಗೊಳ್ಳುತ್ತದೆ ಮತ್ತು ದೇಶೀಯ ಉತ್ಪಾದಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತವೆ. ಕಾಂಗ್ರೆಸ್ ಸಂಪೂರ್ಣವಾಗಿ ವಿಫಲವಾಗಿದೆ, ಅದಕ್ಕಾಗಿಯೇ ಇಂತಹ ನಿರಾಶಾದಾಯಕ ಹೇಳಿಕೆಗಳನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.