ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪನವರಿಗೆ ಮೊದಲೇ ಮಾಹಿತಿ ಇರಬಹುದು: ಡಿ.ಕೆ ಶಿವಕುಮಾರ್
ಬೆಂಗಳೂರಿನಲ್ಲಿ ತಮ್ಮ ಅಧಿಕೃತ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಮಹದೇವಪ್ಪ ನಮ್ಮ ಹೈಕಮಾಂಡ್‌ನ ಭಾಗವೇ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಸಾಧ್ಯತೆ ಕುರಿತು ಹಿರಿಯ ಸಚಿವ ಡಾ ಎಚ್.ಸಿ. ಮಹದೇವಪ್ಪ ಅವರಿಗೆ ಪೂರ್ವ ಮಾಹಿತಿ ಇರಬಹುದೇನೋ ಎಂದು ವ್ಯಂಗ್ಯವಾಗಿ ಹೇಳಿದ್ದು, ನಾಯಕತ್ವ ಬದಲಾವಣೆ ಮತ್ತು ‘ದಲಿತ ಮುಖ್ಯಮಂತ್ರಿ’ ವಿಚಾರ ಮತ್ತೆ ಚರ್ಚೆಗೆ ಬಂದಿದೆ.
ಬೆಂಗಳೂರಿನಲ್ಲಿ ತಮ್ಮ ಅಧಿಕೃತ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಮಹದೇವಪ್ಪ ನಮ್ಮ ಹೈಕಮಾಂಡ್‌ನ ಭಾಗವೇ. ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಅವರಿಗೆ ಮಾಹಿತಿ ಇರಬಹುದು. ಅದಕ್ಕಾಗಿಯೇ ಅವರು ದಲಿತ ಮುಖ್ಯಮಂತ್ರಿಯ ವಿಚಾರ ಎತ್ತಿಕೊಂಡಿರಬಹುದು. ನನಗೆ ಅಂತಹ ಯಾವುದೇ ಮಾಹಿತಿ ಇಲ್ಲ ಎಂದು ವ್ಯಂಗ್ಯವಾಗಿ ಹೇಳಿದರು.
ಕಾಂಗ್ರೆಸ್ ಹೈಕಮಾಂಡ್ ತಮಗೆ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೆಹಲಿಗೆ ಬರಲು ಸೂಚನೆ ನೀಡಿದೆಯೇ ಎಂಬ ಪ್ರಶ್ನೆಗೆ, ನನಗೆ ಅಂತಹ ಯಾವುದೇ ಕರೆ ಬಂದಿಲ್ಲ. ಇಲಾಖೆಯ ಕೆಲಸಕ್ಕಾಗಿ ಮಾತ್ರ ನಾನು ದೆಹಲಿಗೆ ಹೋಗುತ್ತೇನೆ” ಎಂದು ಸ್ಪಷ್ಟಪಡಿಸಿದರು. 1 ಲಕ್ಷ ಕೋಟಿ ಮೌಲ್ಯದ ನಗರಾಭಿವೃದ್ಧಿ ಯೋಜನೆ ಕುರಿತು ಕೇಂದ್ರದ ಅಧಿಕಾರಿಗಳೊಂದಿಗೆ ಚರ್ಚಿಸಿ, ಟಿಯರ್-2 ಮತ್ತು ಟಿಯರ್-3 ನಗರಗಳಿಗೆ ಅನುದಾನ ತಪ್ಪದಂತೆ ನೋಡಿಕೊಳ್ಳುವೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದರೂ ಕೆಲ ಸಚಿವರ ವಿವಾದಾತ್ಮಕ ಹೇಳಿಕೆಗಳ ಕುರಿತು ಮೌನವಾಗಿದ್ದೀರಿ ಎಂಬ ಟೀಕೆಗೆ, ಸಚಿವರು ಮತ್ತು ಶಾಸಕರನ್ನು ನಿಯಂತ್ರಿಸುವುದು ಮುಖ್ಯಮಂತ್ರಿಯ ಜವಾಬ್ದಾರಿ. ಪಕ್ಷದ ವಿಷಯದಲ್ಲಿ ನಾನು ಹೈಕಮಾಂಡ್‌ಗೆ ಮಾಹಿತಿ ನೀಡುತ್ತೇನೆ ಎಂದು ಪ್ರತಿಕ್ರಿಯಿಸಿದರು.
ಬೆಂಗಳೂರು ಅಭಿವೃದ್ಧಿ ಖಾತೆಯನ್ನೂ ಹೊಂದಿರುವ ಶಿವಕುಮಾರ್, ನಗರದಲ್ಲಿ ರಸ್ತೆ ಅಭಿವೃದ್ಧಿಗೆ ₹5,065 ಕೋಟಿ ವೆಚ್ಚವಾಗುತ್ತಿದೆ, ಮುಖ್ಯಮಂತ್ರಿ ₹2,000 ಕೋಟಿ ಮೀಸಲಿಟ್ಟಿದ್ದಾರೆ, 75% ಕಾಮಗಾರಿಗಳು ಪೂರ್ಣಗೊಂಡಿವೆ ಮತ್ತು 65–70 ದಿನಗಳಲ್ಲಿ ಎಲ್ಲಾ ಯೋಜನೆಗಳು ಮುಗಿಯಲಿವೆ ಎಂದು ಹೇಳಿದರು. ಸುಮಾರು 10 ಲಕ್ಷ ಇ-ಖಾತಾ ದಾಖಲೆಗಳನ್ನು ವಿತರಿಸಲು ಯೋಜನೆ ಇದೆ ಎಂದರು. 30,000 ನೋಂದಾಯಿತ ಬೀದಿ ವ್ಯಾಪಾರಿಗಳಿಗೆ ಕಲ್ಯಾಣ ಯೋಜನೆಗಳಡಿ ವಾಹನ ನೆರವು ನೀಡಲಾಗುತ್ತದೆ ಎಂದೂ ತಿಳಿಸಿದರು.
ಮಾರ್ಚ್ 6ರಂದು ಮಂಡನೆಯಾಗುವ ರಾಜ್ಯ ಬಜೆಟ್ ಕುರಿತು, “ಬಜೆಟ್ ರಹಸ್ಯವಾಗಿರಬೇಕು. ಸಚಿವರೂ ಮುಂಚಿತವಾಗಿ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ, ಎಂದು ಶಿವಕುಮಾರ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



