ಮನ್ರೇಗಾ ಭ್ರಷ್ಟಾಚಾರ ತಡೆಗೆ ಹೊಸ ಹೆಸರು; VB-G RAM G ಬಗ್ಗೆ ಕಾಂಗ್ರೆಸ್ ದಾರಿ ತಪ್ಪಿಸುತ್ತಿದೆ: ವಿಜಯೇಂದ್ರ
ಮನ್ರೇಗಾ ಯೋಜನೆಯಲ್ಲಿ ಅನೇಕ ಅಂಶಗಳನ್ನು ಸುಧಾರಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ತರಲಾಗಿದೆ. ಮನ್ರೇಗಾ ಯೋಜನೆಯಲ್ಲಿ ದುರ್ಬಳಕೆ, ಭ್ರಷ್ಟಾಚಾರ ಇತ್ತು. ಮೂಲಸೌಕರ್ಯ ವೃದ್ಧಿಗೆ ಅದು ಸಹಕಾರಿ ಆಗಿರಲಿಲ್ಲ. ಅದಕ್ಕಾಗಿ ವಿಬಿ ಜಿ ರಾಮ್ ಜಿಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ.

ಬೆಂಗಳೂರು: ಮನ್ರೇಗಾ ಭ್ರಷ್ಟಾಚಾರ ತಡೆಗೆ ಹೊಸ ಹೆಸರಿಡಲಾಗಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ಬಗ್ಗೆ ಕಾಂಗ್ರೆಸ್ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನ್ರೇಗಾದ ಹಲವಾರು ಅಂಶಗಳಲ್ಲಿ ಬದಲಾವಣೆಗಳನ್ನು ಮಾಡಿದ ನಂತರ NDA ಸರ್ಕಾರ ಈ ಕಾಯ್ದೆಯನ್ನು ಪರಿಚಯಿಸಿದೆ. ಇದು ಸಕಾರಾತ್ಮಕ ಚಿಂತನೆ ಇರುವ ಕಾಯ್ದೆ, ಮನ್ರೇಗಾ ಯೋಜನೆಯಲ್ಲಿ ಅನೇಕ ಅಂಶಗಳನ್ನು ಸುಧಾರಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ತರಲಾಗಿದೆ. ಮನ್ರೇಗಾ ಯೋಜನೆಯಲ್ಲಿ ದುರ್ಬಳಕೆ, ಭ್ರಷ್ಟಾಚಾರ ಇತ್ತು. ಮೂಲಸೌಕರ್ಯ ವೃದ್ಧಿಗೆ ಅದು ಸಹಕಾರಿ ಆಗಿರಲಿಲ್ಲ. ಅದಕ್ಕಾಗಿ ವಿಬಿ ಜಿ ರಾಮ್ ಜಿಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಸಮರ್ಥಿಸಿಕೊಂಡರು.
ಆದರೆ, ಇದರ ವಿರುದ್ಧ ಕಾಂಗ್ರೆಸ್ ಈಗಾಗಲೇ ಅಪಪ್ರಚಾರ ಶುರು ಮಾಡಿದೆ. ಕೇಂದ್ರದ ಯೋಜನೆಗಳಲ್ಲಿ ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ನಿರಂತರವಾಗಿ ಮಾಡಿಕೊಂಡು ಬಂದಿದೆ. ಕಾಂಗ್ರೆಸ್‌ಗೆ ಕಾಂಗ್ರೆಸ್‌ಗೆ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಇರುವುದನ್ನು ಸಹಿಸಲು ಆಗುತ್ತಿಲ್ಲ. ಈಗ ವಿ ಬಿಜೆ ರಾಮ್ ಜಿ ವಿರುದ್ಧ ಅಪಪ್ರಚಾರ ಶುರು ಮಾಡಿದ್ದಾರೆಂದು ತಿಳಿಸಿದರು.
ಇದೇ ವೇಳೆ ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಯೋಜನೆ ಪರ ಜ.15ರಿಂದ ಫೆ.28ರವರೆಗೆ ಕರ್ನಾಟಕದಾದ್ಯಂತ ಜಾಗೃತಿ ಅಭಿಯಾನ ಮಾಡುತ್ತೇವೆಂದು ಹೇಳಿದರು.
ಗಾಂಧೀಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ನನಸಾಗಬೇಕಾದರೆ ಹಳ್ಳಿಗಳು ಉದ್ಧಾರ ಆಗಬೇಕು. ಅಂಬೇಡ್ಕರ್ ಆಗಲಿ ಗಾಂಧಿಯವರಾಗಲೀ ಅವರ ಹೆಸರಿಗೆ ಬಿಜೆಪಿ ಅಪಮಾನ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ. ಅಪಮಾನ ಮಾಡೋ ಜಾಯ ಮಾನ ಇರೋದು ಕಾಂಗ್ರೆಸ್ಸಿಗೆ ಮಾತ್ರ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



