ಲೂಟಿಕೋರನ ಭಯವೇ? ಖರ್ಗೆಯವರೇ.., ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್
ಆರು ದಶಕಗಳಿಂದ ಅಧಿಕಾರ ಅನುಭವಿಸಿರುವ AICC ಅಧ್ಯಕ್ಷ ಖರ್ಗೆಯವರೇ ನಿಮ್ಮದೇ ಕಾಂಗ್ರೆಸ್ ಸರ್ಕಾರದಲ್ಲಿ ಭಿಕ್ಷೆ ಬೇಡುವ ಸ್ಥಿತಿ ಬರಬಾರದಿತ್ತು ಎಂದು ಜೆಡಿಎಸ್ ಲೇವಡಿ ಮಾಡಿದೆ.

ಕಲಬುರಗಿ: AICC ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೋಮವಾರ ಒಂದೇ ವೇದಿಕೆಯಲ್ಲಿ ಆಡಿರುವ ಮಾತುಗಳು ಆಡಳಿತಾರೂಢ ಕಾಂಗ್ರೆಸ್ ಹಾಗೂ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿರುವಂತೆಯೇ ಜೆಡಿಎಸ್ ಟಾಂಗ್ ನೀಡಿದೆ.
ಹೌದು.ಇಂದು ಕಲಬುರಗಿ ಜಿಲ್ಲೆ ಯಡ್ರಾಮಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕಲ್ಯಾಣ ಕರ್ನಾಟದ ಭಾಗಕ್ಕೆ ಹರಿದು ಬರುತ್ತಿರುವ ಅನುದಾನವನ್ನು ಉಲ್ಲೇಖಿಸಿ ನಾನು ಈ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಎಂಬ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ತೀಕ್ಷ್ಣವಾಗಿ ಟಾಂಗ್ ಕೊಟ್ಟಿದ್ದಾರೆ.
ಈ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಆದರೆ ನೀವು ಇಲ್ಲಿ ಹುಟ್ಟುವುದು ಬೇಡ. ನಾವು ಅಲ್ಲಿ ಹುಟ್ಟುವುದು ಬೇಡ. ನಿಮ್ಮ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ ಎಂದು ತಿರುಗೇಟು ನೀಡಿದರು.
ಈ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಜೆಡಿಎಸ್ ಖರ್ಗೆ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಟಾಂಗ್ ನೀಡಿದೆ. ಆರು ದಶಕಗಳಿಂದ ಅಧಿಕಾರ ಅನುಭವಿಸಿರುವ AICC ಅಧ್ಯಕ್ಷ ಖರ್ಗೆಯವರೇ ನಿಮ್ಮದೇ ಕಾಂಗ್ರೆಸ್ ಸರ್ಕಾರದಲ್ಲಿ ಭಿಕ್ಷೆ ಬೇಡುವ ಸ್ಥಿತಿ ಬರಬಾರದಿತ್ತು ಎಂದು ಲೇವಡಿ ಮಾಡಿದೆ.
ಕಳೆದ 6 ದಶಕಗಳಿಂದಲೂ ಅಧಿಕಾರ ಅನುಭವಿಸುತ್ತಿರುವ ಖರ್ಗೆ ಮತ್ತು ಕುಟುಂಬ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮರೆತು, ತಮ್ಮ ಕುಟುಂಬದ ಕಲ್ಯಾಣ ಮಾಡಿಕೊಂಡಿರುವುದೇ ಹೆಚ್ಚು ಎಂದು ಪೋಸ್ಟ್ ಮಾಡಿದೆ.
ರಾಜಕೀಯ ಕೊನೆಘಟ್ಟದಲ್ಲಿರುವ AICC ಅಧ್ಯಕ್ಷ ಖರ್ಗೆಯವರೇ, ನಿಮ್ಮದೇ ಸರ್ಕಾರದಲ್ಲಿ ಭಿಕ್ಷೆ ಬೇಡುವ ದಯನೀಯ ಸ್ಥಿತಿ ಬರಬಾರದಿತ್ತು. ಡಿಕೆ ಶಿವಕುಮಾರ್ ಕಲಬುರಗಿಯಲ್ಲಿ ಹುಟ್ಟಬೇಕಿತ್ತು ಎಂದಿದ್ದಕ್ಕೆ ನೀವು ಬೇಡ ಎಂದಿದ್ದರ ಮರ್ಮ ಏನು?ಲೂಟಿಕೋರನ ಬಗ್ಗೆ ಭಯವೇ? ಎಂದು ವ್ಯಂಗವಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


