'ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಸರ್ಕಾರದ ಅಲಿಖಿತ ನಿಯಮ..!'
ಕಾಂಗ್ರೆಸ್ ಸರ್ಕಾರ ತನ್ನ ತುಷ್ಟೀಕರಣ ಮತ್ತು ಓಲೈಕೆ ರಾಜಕೀಯಕ್ಕಾಗಿ, ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿಯ ವಿರುದ್ಧ ದನಿಯೆತ್ತಿ, ಸಮಾಜದ ಸುರಕ್ಷತೆಗಾಗಿ ಸರ್ಕಾರ ಮಾಡಬೇಕಿದ್ದ ಕೆಲಸವನ್ನು ಮಾಡುತ್ತಿರುವವರನ್ನು ಬಂಧಿಸಿದೆ.

ಬೆಂಗಳೂರು: ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಭ್ರಷ್ಟ ಸರ್ಕಾರದ ಅಲಿಖಿತ ನಿಯಮವಾದಂತಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಲಿಖಿತ ನಿಯಮವಾದಂತಿದೆ. ದೇಶದ ಭದ್ರತೆಗೆ ಸವಾಲಾಗಿರುವ ಅಕ್ರಮ ವಲಸಿಗರ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿರುವುದು ಖಂಡನೀಯ, ಇದು ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ತನ್ನ ತುಷ್ಟೀಕರಣ ಮತ್ತು ಓಲೈಕೆ ರಾಜಕೀಯಕ್ಕಾಗಿ, ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿಯ ವಿರುದ್ಧ ದನಿಯೆತ್ತಿ, ಸಮಾಜದ ಸುರಕ್ಷತೆಗಾಗಿ ಸರ್ಕಾರ ಮಾಡಬೇಕಿದ್ದ ಕೆಲಸವನ್ನು ಮಾಡುತ್ತಿರುವವರನ್ನು ಬಂಧಿಸಿದೆ. ಹಿಂದೂ ಪರವಾಗಿ, ಸಮಾಜದ ಸುರಕ್ಷತೆಗಾಗಿ ನಿಲ್ಲುವವರ ಮೇಲೆ ಪೊಲೀಸ್ ಬಲಪ್ರಯೋಗಿಸಿ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಇನ್ನೊಂದೆಡೆ, ಮಹಿಳಾ ಸರ್ಕಾರಿ ಅಧಿಕಾರಿಗೆ ಅಸಭ್ಯವಾಗಿ ಬೈದು, ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ತಲೆಮರೆಸಿಕೊಂಡಿದ್ದರೂ ಪೊಲೀಸರಿಗೆ ಆತನ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ.
ಸ್ವಪಕ್ಷದ ಅಪರಾಧಿಗಳಿಗೆ ರಾಜಾತಿಥ್ಯ, ಸಮಾಜದ ಹಿತ ಬಯಸುವವರ ಮೇಲೆ ದಮನಕಾರಿ ನೀತಿ - ಇದೇ ಈ ಕಾಂಗ್ರೆಸ್ ಸರ್ಕಾರದ ನಾಚಿಕೆಗೇಡಿನ ಆಡಳಿತ ವೈಖರಿ. ರಾಜ್ಯ ಸರ್ಕಾರ ತನ್ನ ಪಕ್ಷಪಾತ ಧೋರಣೆಯನ್ನು ಕೈಬಿಟ್ಟು, ಕಾನೂನು ಎಲ್ಲರಿಗೂ ಸಮಾನವಾಗಿರುವಂತೆ ನೋಡಿಕೊಳ್ಳದಿದ್ದರೆ, ಸಂವಿಧಾನಾತ್ಮಕ ಹಕ್ಕುಗಳ ದಮನದ ವಿರುದ್ಧ ರಾಜ್ಯದ ಜನತೆ ಬೀದಿಗಿಳಿದು ಹೋರಾಡಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



