ರಾಜಕೀಯ

ವೈಫಲ್ಯಗಳ ಮರೆಮಾಚಲು ರಾಜ್ಯ ಸರ್ಕಾರದಿಂದ ಜಂಟಿ ಅಧಿವೇಶನ ದುರುಪಯೋಗ: ಹೆಚ್.ಡಿ ಕುಮಾರಸ್ವಾಮಿ

ಬೀದಿಯಲ್ಲಿ ಚರ್ಚೆ ಮಾಡುವಂತಹ ವಿಷಯಗಳನ್ನು ಈ ಸರ್ಕಾರ ಮತ್ತು ಅದರ ಸಚಿವರು ರಾಜ್ಯಪಾಲರ ಮುಖಾಂತರ ವಿಧಾನಸಭೆಯಲ್ಲಿ ಹೇಳಿಸಬೇಕು ಎಂದು ಬಯಸಿದ್ದರು. ಹೀಗಾಗಿ ಈ ಘಟನೆ ನಡೆದಿದೆ.

ವೈಫಲ್ಯಗಳ ಮರೆಮಾಚಲು ರಾಜ್ಯ ಸರ್ಕಾರದಿಂದ ಜಂಟಿ ಅಧಿವೇಶನ ದುರುಪಯೋಗ: ಹೆಚ್.ಡಿ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Published On :

ಬೆಂಗಳೂರು: ತನ್ನ ವೈಫಲ್ಯಗಳನ್ನು ಜನರಿಂದ ಮರೆಮಾಚುವ ಉದ್ದೇಶದಿಂದ ರಾಜ್ಯ ಸರ್ಕಾರ ಜಂಟಿ ಅಧಿವೇಶನವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದೇ ತಾವೇ ಸಿದ್ಧಪಡಿಸಿದ ಭಾಷಣವನ್ನು ಓದಿ ಸದನದಿಂದ ಹೊರನಡೆದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ನಡೆಯನ್ನು ಸಮರ್ಥಿಸಿಕೊಂಡರು.

ತನ್ನ ವೈಫಲ್ಯಗಳನ್ನು ಜನರಿಂದ ಮರೆಮಾಚುವ ಉದ್ದೇಶದಿಂದ ರಾಜ್ಯ ಸರ್ಕಾರ ಜಂಟಿ ಅಧಿವೇಶನವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು.

ಈ ಸರ್ಕಾರದ ಸಣ್ಣತನದ ನಡವಳಿಕೆಯಿಂದ ಇಂತಹ ಒಂದು ಪ್ರಕರಣ ರಾಜ್ಯದಲ್ಲಿ ಮೊದಲ ಬಾರಿಗೆ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೀದಿಯಲ್ಲಿ ಚರ್ಚೆ ಮಾಡುವಂತಹ ವಿಷಯಗಳನ್ನು ಈ ಸರ್ಕಾರ ಮತ್ತು ಅದರ ಸಚಿವರು ರಾಜ್ಯಪಾಲರ ಮುಖಾಂತರ ವಿಧಾನಸಭೆಯಲ್ಲಿ ಹೇಳಿಸಬೇಕು ಎಂದು ಬಯಸಿದ್ದರು. ಹೀಗಾಗಿ ಈ ಘಟನೆ ನಡೆದಿದೆ. ಒಟ್ಟಾರೆ ಈ ಸರ್ಕಾರ ತನ್ನ ತಪ್ಪುಗಳನ್ನು ಮರೆಮಾಚಲು ಜಂಟಿ ಅಧಿವೇಶನ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.