ಬಿಜೆಪಿಯಲ್ಲಿ ಮುಂದುವರಿದ ಉಚ್ಚಾಟನೆ ಪರ್ವ; ಸತೀಶ್ಗೆ ಶಾಕ್; ಪಕ್ಷದಿಂದ 6 ವರ್ಷ ಅಮಾನತು
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಸತೀಶ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಉಚ್ಚಾಟನೆ ಪರ್ವ ಮುಂದುವರೆದಿದ್ದು, ಇತ್ತೀಚಿಗಷ್ಟೇ ರಾಜ್ಯ ಬಿಜೆಪಿ ವಕ್ತಾರ ಎಂಜಿ ಮಹೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿತ್ತು. ಇದೀಗ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಬಮೂಲ್ ನಿರ್ದೇಶಕ ಸತೀಶ್ ಕಡತನಮಲೆ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಸತೀಶ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಸ್ಥಳೀಯ ಬಿಜೆಪಿ ಮುಖಂಡರು ಸತೀಶ್ ಅವರ ನಡವಳಿಕೆ ಕುರಿತು ರಾಜ್ಯ ಶಿಸ್ತು ಸಮಿತಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷವು ಅವರಿಗೆ ನೋಟಿಸ್ ನೀಡಿ ಸ್ಪಷ್ಟೀಕರಣ ಕೇಳಿತ್ತು. ಆದರೆ ಸತೀಶ್ ಕಡತನಮಲೆ ಅವರು ನೀಡಿದ ಸ್ಪಷ್ಟೀಕರಣವು ಸಮಂಜಸ ಹಾಗೂ ತೃಪ್ತಿಕರವಾಗಿಲ್ಲದ ಕಾರಣ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಉಚ್ಚಾಟಿಸಿದ್ದು ಯಾಕೆ?
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿದಂತೆ ಸ್ಥಳೀಯ ಪ್ರಮುಖ ಬಿಜೆಪಿ ನಾಯಕರ ವಿರುದ್ಧ ಸತೀಶ್ ಕಡತನಮಲೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಪದೇಪದೇ ಸುದ್ದಿಗೋಷ್ಠಿಗಳನ್ನು ನಡೆಸುವ ಮೂಲಕ ಮಾಧ್ಯಮಗಳ ಮುಂದೆ ಪಕ್ಷ ಮತ್ತು ನಾಯಕರ ವಿರುದ್ಧ ಹೇಳಿಕೆ ನೀಡಿ ಮುಜುಗರ ಉಂಟುಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



