ರಾಜಕೀಯ

ಮುಸ್ಲಿಂರು ಬಾಂಗ್ಲಾದವರು: ಒಂದು ಕೋಮಿನ ಮೇಲೆ ಗೂಬೆ ಕೂರಿಸುವ ಪ್ರಯತ್ನ; ಕುಮಾರಸ್ವಾಮಿ ವಿರುದ್ಧ ಶಾಸಕ ಹೆಚ್.ಸಿ ಬಾಲಕೃಷ್ಣ ಕಿಡಿ!

ಮತ ಹಾಕಿಸಿಕೊಳ್ಳುತ್ತಿದ್ದಾಗ ಮುಸ್ಲಿಮರೆಲ್ಲರೂ ಕುಮಾರಸ್ವಾಮಿ ಅವರ ಪಾಲಿಗೆ ಸ್ಥಳೀಯರಾಗಿದ್ದರು. ಆದರೆ, ಈಗ ಎಸ್ಐಆರ್ ಕಾರಣಕ್ಕೆ ಬಾಂಗ್ಲಾದೇಶದವರಾಗಿ ಕಾಣುತ್ತಿದ್ದಾರೆ. ಒಂದು ಕೋಮಿನ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಮುಸ್ಲಿಂರು ಬಾಂಗ್ಲಾದವರು: ಒಂದು ಕೋಮಿನ ಮೇಲೆ ಗೂಬೆ ಕೂರಿಸುವ ಪ್ರಯತ್ನ; ಕುಮಾರಸ್ವಾಮಿ ವಿರುದ್ಧ ಶಾಸಕ ಹೆಚ್.ಸಿ ಬಾಲಕೃಷ್ಣ ಕಿಡಿ!
ಶಾಸಕ ಹೆಚ್.ಸಿ. ಬಾಲಕೃಷ್ಣ, ಎಚ್. ಡಿ. ಕುಮಾರಸ್ವಾಮಿ ಸಾಂದರ್ಭಿಕ ಚಿತ್ರ
Published On :

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಮನಗರ ಮತ್ತು ಚನ್ನಪಟ್ಟಣ ಭಾಗದಲ್ಲಿ ಮುಸ್ಲಿಂ ಮತದಾರರನ್ನು ಗುರಿಯಾಗಿಸಿ, ಅವರು ಬಾಂಗ್ಲಾದೇಶಿ ವಲಸಿಗರು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತು ನಗರದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣ, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಮತ ಹಾಕಿಸಿಕೊಳ್ಳುತ್ತಿದ್ದಾಗ ಮುಸ್ಲಿಮರೆಲ್ಲರೂ ಕುಮಾರಸ್ವಾಮಿ ಅವರ ಪಾಲಿಗೆ ಸ್ಥಳೀಯರಾಗಿದ್ದರು. ಆದರೆ, ಈಗ ಎಸ್ಐಆರ್ ಕಾರಣಕ್ಕೆ ಬಾಂಗ್ಲಾದೇಶದವರಾಗಿ ಕಾಣುತ್ತಿದ್ದಾರೆ. ಒಂದು ಕೋಮಿನ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಎಸ್ ಐಆರ್ ವಿಷಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನವರು ಗೊಂದಲ ಸೃಷ್ಟಿಸುತ್ತಾ ಉದ್ದೇಶಪೂರ್ವಕವಾಗಿ ಒಂದು ಕೋಮಿನ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ತಳಮಟ್ಟದಲ್ಲಿ ಎಸ್ ಐಆರ್ ಪ್ರಕ್ರಿಯೆಯಲ್ಲಿ ತೊಡಗಿರುವ ಶಿಕ್ಷಕರ ಮೇಲೆ ಗೂಬೆ ಕೂರಿಸಿ, ಅವರಿಗೆ ಅವಮಾನ ಮಾಡುತ್ತಿದ್ದಾರೆ. ಇದನ್ನು ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿದೆ ವಿನಾ: ರಾಜ್ಯ ಸರ್ಕಾರ ಅಲ್ಲ ಎಂದರು.

ಆಯೋಗಕ್ಕೆ ಸಂಬಂಧಿಸಿದ ಕರ್ತವ್ಯಗಳಲ್ಲಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಯೋಗದ ನಿಯಂತ್ರಣದಲ್ಲಿರುತ್ತಾರೆ. ಮಾನದಂಡಕ್ಕೆ ಅನುಗುಣವಾಗಿಯೇ ಎಸ್ ಐಆರ್ ನಡೆಯುತ್ತಿದೆ. ಅಗತ್ಯ ದಾಖಲೆ ಕೊಟ್ಟರಷ್ಟೇ ಪ್ರಕ್ರಿಯೆ ನಡೆಸಲು ಸಾಧ್ಯ. ಹೀಗಿರುವಾಗ ಅಕ್ರಮ ಹೇಗೆ ನಡೆಸಲು ಸಾಧ್ಯ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.