ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರದ ಬುಡ ಅಲುಗಾಡಬಹುದು; ಮೂರನೇ CM ಬರಲು ಸಾಧ್ಯವಿಲ್ಲ; ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ಪಕ್ಷದಲ್ಲೂ ಮೂವರು ಸಿಎಂಗಳಾಗುತ್ತಾರೆ ಎಂಬುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುತ್ತಾರೆ. ನಮ್ಮ ಸರಕಾರ ಗಟ್ಟಿಯಾಗಿದೆ ಎಂದು ಹೇಳಿದರು.

ಬೆಂಗಳೂರು: ಮುಂದಿನ ಸುತ್ತಿನ ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್ ಸರ್ಕಾರ "ಎರಡು-ಮೂರು ದಿನಗಳವರೆಗೆ ಅಲುಗಾಡುತ್ತದೆ" ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸರ್ಕಾರದ ಬುಡ ಅಲ್ಲಾಡಲಿದೆ ಎಂದು ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೀಡಿದ್ದ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದ ಅವರು , ಆಗಸ್ಟ್‌ನಲ್ಲಿ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಹೇಳಿದರು. ಸ್ವಲ್ಪ ಮಟ್ಟಿಗೆ ಅಲುಗಾಡುತ್ತೆ ಆದ್ರೆ ಏನು ಆಗಲ್ಲ ಎಂದಿದ್ದಾರೆ. ಹೆಚ್ಚೆಂದ್ರೆ ಎರಡು ಮೂರು ದಿನಗಳು ಅಲ್ಲಾಡಬಹುದು, ಆಮೇಲೆ ಎಲ್ಲವೂ ಸರಿ ಹೋಗುತ್ತೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲೂ ಮೂವರು ಸಿಎಂಗಳಾಗುತ್ತಾರೆ ಎಂಬುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುತ್ತಾರೆ. ನಮ್ಮ ಸರಕಾರ ಗಟ್ಟಿಯಾಗಿದೆ ಎಂದು ಹೇಳಿದರು.
ಸಂಪುಟ ವಿಸ್ತರಣೆ ವಿಳಂಬ ವಿಚಾರದಲ್ಲಿ ನಾವು ಏನೂ ಮಾಡಲು ಆಗುವುದಿಲ್ಲ. ವಿಸ್ತರಣೆ ಮಾಡುವವರೆಗೆ ಕಾಯಲೇಬೇಕು. ಈಗಾಗಲೇ ಒಂದು ತಿಂಗಳು ತಡವಾಗಿದೆ ಎಂದರು.
ಉಳಿದ 20 ಸ್ಥಾನಗಳನ್ನು ಭರ್ತಿ ಮಾಡುವಾಗ ಜಾತಿ ಮತ್ತು ಪ್ರಾದೇಶಿಕ ಸಮೀಕರಣಗಳನ್ನು ಪರಿಗಣಿಸಲು ಪಕ್ಷವು ಉತ್ಸುಕವಾಗಿದೆ ಎಂದು ಹೇಳಲಾಗುತ್ತದೆ (ಕರ್ನಾಟಕವು 224 ಸದಸ್ಯರನ್ನು ಹೊಂದಿರುವ ವಿಧಾನಸಭೆಯಲ್ಲಿ ಗರಿಷ್ಠ 34 ಮಂತ್ರಿಗಳನ್ನು ಹೊಂದಬಹುದು.
ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗುವ ಮುನ್ನವೇ ಚರ್ಚೆ ಮಾಡುವ ಅಗತ್ಯ ಇಲ್ಲ. ಅಲ್ಲಿ ನಾವು ಯಾರನ್ನೂ ಗುರಿ ಮಾಡುತ್ತಿಲ್ಲ. ಕೆಲ ಜವಾಬ್ದಾರಿಗಳ ಹಿನ್ನೆಲೆಯಲ್ಲಿ ತಾವು ಆ ಕ್ಷೇತ್ರಕ್ಕೆ ಭೇಟಿ ಮಾಡಿದ್ದು ನಿಜ. ಚುನಾವಣೆ ಬಂದಾಗ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ವಿವರಣೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



