ರಾಜಕೀಯ

'ನೀನು ಹೋಗೋ ಕಾಲ ಬಂದಿದೆ; ನಿಮ್ಮವ್ವ-ನಿಮ್ಮಪ್ಪನ ಇತಿಹಾಸ ಗೊತ್ತಿದೆ; ಅಗತ್ಯ ಬಿದ್ರೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸುವೆ'; Video

ನಾನು ಮೊನ್ನೆ ಬಿಜೆಪಿಗೆ ಮತ ಹಾಕಿದ್ದೇನೆ. ನಾನು ಯಾವ ಪಕ್ಷದ ಶಾಸಕನಾಗಿದ್ದೇನೋ ಆ ಪಕ್ಷಕ್ಕೆ ಮತ ಹಾಕಿದ್ದೇನೆ. ಇದರಿಂದ ಕೆಲವರ ಎದೆ ಒಡೆದಂತಾಗಿದೆ ಎಂದು ಹೇಳಿದರು. ಕೆಲವರು ಕಾಂಗ್ರೆಸ್‌ನಿಂದ ಹಣ ಹಾಗೂ ಅಭಿವೃದ್ಧಿಗೆ ಅನುದಾನ ಸಿಗಬಹುದು ಎಂದು ನಿರೀಕ್ಷಿಸಿದ್ದರು.

'ನೀನು ಹೋಗೋ ಕಾಲ ಬಂದಿದೆ; ನಿಮ್ಮವ್ವ-ನಿಮ್ಮಪ್ಪನ ಇತಿಹಾಸ ಗೊತ್ತಿದೆ; ಅಗತ್ಯ ಬಿದ್ರೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸುವೆ'; Video
ಬಸನಗೌಡ ಪಾಟೀಲ್ ಯತ್ನಾಳ್
Published On :

ವಿಜಯಪುರ: ಅತ್ಯಂತ ವ್ಯವಸ್ಥಿತವಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್ ಅವರಿಗೆ ಸಹಾಯ ಮಾಡುವ ಕೆಲಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಡಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹರಿಹಾಯ್ದಿದ್ದಾರೆ.

ವಿಜಯಪುರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವೈಯಕ್ತಿಕ ವಿಚಾರ ಹಾಗೂ ನನ್ನ ಕುಟುಂಬದ ಬಗ್ಗೆ ಕೆಟ್ಟ ರೀತಿಯಲ್ಲಿ ಮಾತನಾಡಿದರೆ, ನಿಮ್ಮ ಕುಟುಂಬದ ಇತಿಹಾಸ ನನ್ನ ಬಳಿ ಇದೆ. ಅಗತ್ಯ ಬಂದರೆ ಅದನ್ನೂ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಬೇಕಾಗುತ್ತದೆ. ನಿಮ್ಮ ಚೇಲಾಗಳಿಂದ ನನ್ನ ವಿರುದ್ಧ ಏನಾದರೂ ಪೋಸ್ಟ್ ಮಾಡಿಸಿದರೆ, ಅದಕ್ಕಿಂತ ತೀಕ್ಷ್ಣವಾಗಿ ನಾನು ಉತ್ತರ ನೀಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಾನು ಮೊನ್ನೆ ಬಿಜೆಪಿಗೆ ಮತ ಹಾಕಿದ್ದೇನೆ. ನಾನು ಯಾವ ಪಕ್ಷದ ಶಾಸಕನಾಗಿದ್ದೇನೋ ಆ ಪಕ್ಷಕ್ಕೆ ಮತ ಹಾಕಿದ್ದೇನೆ. ಇದರಿಂದ ಕೆಲವರ ಎದೆ ಒಡೆದಂತಾಗಿದೆ ಎಂದು ಹೇಳಿದರು. ಕೆಲವರು ಕಾಂಗ್ರೆಸ್‌ನಿಂದ ಹಣ ಹಾಗೂ ಅಭಿವೃದ್ಧಿಗೆ ಅನುದಾನ ಸಿಗಬಹುದು ಎಂದು ನಿರೀಕ್ಷಿಸಿದ್ದರು.

ಆದರೆ ಬಿಜೆಪಿಯ ಕೆಲ ಶಾಸಕರು ಕೂಡ ಮತ ಹಾಕಿದ್ದಾರೆ. ನಮ್ಮ ಮಾಹಿತಿಯ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷರೇ ಮತ ಹಾಕಿಸಿರುವ ಸಾಧ್ಯತೆಯಿದೆ ಎಂದು ಯತ್ನಾಳ ಆರೋಪಿಸಿದರು.

ಡಿ.ಕೆ. ಶಿವಕುಮಾರ್ ಹೇಳಿದಂತೆ ಮತ ಹಾಕದಿದ್ದರೆ ನನ್ನ ಹಗರಣಗಳನ್ನು ಹೊರತೆಗೆಯುತ್ತಾರೆ ಎಂಬ ಭಯದಿಂದ ಬಿಜೆಪಿ ರಾಜ್ಯಾಧ್ಯಕ್ಷರು ನಡೆದುಕೊಂಡಿದ್ದಾರೆ. ಮತದಾನಕ್ಕೂ ಮುನ್ನ ವಿಪ್ ನೀಡಬೇಕಿತ್ತು. ಆದರೆ ಮತದಾನದ ನಂತರ ವಿಪ್ ಜಾರಿಗೊಳಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಬೆಂಬಲ ನೀಡುವ ಉದ್ದೇಶದಿಂದ ಬಿಜೆಪಿ ರಾಜ್ಯಾಧ್ಯಕ್ಷರು ನಾಚಿಕೆಗೇಡಿನ ಕೆಲಸ ಮಾಡಿದ್ದಾರೆ ಎಂದು ಟೀಕಿಸಿದರು.

ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದು ಮಾಹಿತಿ ನೀಡಿರುವುದಾಗಿ ತಿಳಿಸಿದ ಅವರು, ಈ ಹಿನ್ನೆಲೆಯಲ್ಲಿ ಕೆಲವು ನಕಲಿ ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ತಾವು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂಬ ಅನುಮಾನ ಮೂಡಿಸುವ ರೀತಿಯ ಪೋಸ್ಟ್‌ಗಳನ್ನು ಹಾಕಿಸಲಾಗಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.