ಬಿಡದಿ ಟೌನ್‌ಶಿಪ್‌ಗಾಗಿ ರೈತರ ಬೆಳೆಭೂಮಿ ಸ್ವಾಧೀನ ಖಂಡನೀಯ, ಬೆದರಿಕೆ ನಿಲ್ಲಿಸಿ ಮಾತುಕತೆ ನಡೆಸಿ: ಆರ್.ಅಶೋಕ್
ರೈತರ ಮೇಲೆ ನಡೆಯುತ್ತಿರುವ ಬೆದರಿಕೆ ಮತ್ತು ಒತ್ತಡದ ರಾಜಕಾರಣವನ್ನು ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಬೇಕು. ರೈತರೊಂದಿಗೆ ಮುಕ್ತವಾಗಿ ಮಾತುಕತೆ ನಡೆಸಿ ಅವರ ಅಭಿಪ್ರಾಯಕ್ಕೆ ಗೌರವ ನೀಡಬೇಕು.

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯ ಹೆಸರಿನಲ್ಲಿ ರೈತರ ಒಪ್ಪಿಗೆ ಇಲ್ಲದೆ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿರುವುದು ಅತ್ಯಂತ ಖಂಡನೀಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರ ಮೇಲೆ ನಡೆಯುತ್ತಿರುವ ಬೆದರಿಕೆ ಮತ್ತು ಒತ್ತಡದ ರಾಜಕಾರಣವನ್ನು ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಬೇಕು. ರೈತರೊಂದಿಗೆ ಮುಕ್ತವಾಗಿ ಮಾತುಕತೆ ನಡೆಸಿ ಅವರ ಅಭಿಪ್ರಾಯಕ್ಕೆ ಗೌರವ ನೀಡಬೇಕು. ರೈತರ ಹೋರಾಟದಲ್ಲಿ ಬಿಜೆಪಿ ಸದಾ ಅವರೊಂದಿಗೆ ದೃಢವಾಗಿ ನಿಲ್ಲಲಿದೆ ಎಂದು ಹೇಳಿದ್ದಾರೆ.
ವಿಧಾನ ಪರಿಷತ್‌ನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್. ರವಿ ಕುಮಾರ್ ಅವರು ಮಾತನಾಡಿ, ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಒಳಗೊಂಡ ಸಮಗ್ರ ಶ್ವೇತಪತ್ರವನ್ನು ಸರ್ಕಾರ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದಾರೆ.
ಯೋಜನೆಗಾಗಿ ಸರ್ಕಾರದ ಬಳಿ ಈಗಾಗಲೇ ಎಷ್ಟು ಭೂಮಿ ಲಭ್ಯವಿದೆ, ಎಷ್ಟು ಖಾಸಗಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಲಾಗಿದೆ ಹಾಗೂ ಗೋಮಾಳ ಭೂಮಿಯ ಪ್ರಮಾಣ ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಒತ್ತಾಯಿಸಿದರು.
ಅಲ್ಲದೆ, ರೈತರ ವಿರೋಧದ ನಡುವೆಯೇ ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದುವರಿಸಬಾರದು. ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ, ರೈತರೊಂದಿಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




