ರಾಜಕೀಯ

Bidadi township ವಿವಾದ: ರೈತರಿಗೆ HDK ಬೆಂಬಲ; ಶಾಂತಿಯತ ಹೋರಾಟ ನಡೆಸುವಂತೆ ಮನವಿ..!

ರೈತರು ಯಾವುದೇ ಕಾರಣಕ್ಕೂ ಶಾಂತಿ ಕಳೆದುಕೊಳ್ಳಬಾರದು. ಕಾನೂನಿನ ಚೌಕಟ್ಟಿನೊಳಗೆ ಶಾಂತಿಯುತ ಹೋರಾಟವನ್ನು ಮುಂದುವರಿಸಬೇಕು ನಿಮ್ಮ ಹೋರಾಟಕ್ಕೆ ಅನೇಕರು ಬೆಂಬಲ ನೀಡಲು ಸಿದ್ಧರಿದ್ದಾರೆ.

Bidadi township ವಿವಾದ: ರೈತರಿಗೆ HDK ಬೆಂಬಲ; ಶಾಂತಿಯತ ಹೋರಾಟ ನಡೆಸುವಂತೆ ಮನವಿ..!
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ — online desk
Published On :

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆ ಸೋಮವಾರ ಹಿಂಸಾತ್ಮಕ ಸ್ವರೂಪ ಪಡೆದಿರುವ ಬೆನ್ನಲ್ಲೇ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ರೈತರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ವಿಡಿಯೋ ಸಂದೇಶ ನೀಡಿರುವ ಹೆಚ್‌.ಡಿ. ಕುಮಾರಸ್ವಾಮಿ ಅವರು, ಕಳೆದ 500 ದಿನಗಳಿಂದ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಸೋಮವಾರ ಅಧಿಕಾರಿಗಳು ಏಕಾಏಕಿ ಗ್ರಾಮಗಳಿಗೆ ತೆರಳಿ ಭೂ ಸಮೀಕ್ಷೆ ನಡೆಸಲು ಮುಂದಾದ ಕಾರಣ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ರೈತರು ಯಾವುದೇ ಕಾರಣಕ್ಕೂ ಶಾಂತಿ ಕಳೆದುಕೊಳ್ಳಬಾರದು. ಕಾನೂನಿನ ಚೌಕಟ್ಟಿನೊಳಗೆ ಶಾಂತಿಯುತ ಹೋರಾಟವನ್ನು ಮುಂದುವರಿಸಬೇಕು ನಿಮ್ಮ ಹೋರಾಟಕ್ಕೆ ಅನೇಕರು ಬೆಂಬಲ ನೀಡಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದು ರೈತರ ವಿರುದ್ಧ ಕ್ರಮ ಕೈಗೊಳ್ಳಬೇಡಿ" ಎಂದು ಪೊಲೀಸ್ ಅಧಿಕಾರಿಗಳಿಗೆ ಅವರು ಮನವಿ ಮಾಡಿದ್ದಾರೆ.

ಇದೇ ವೇಳೆ, ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನೀರು ಬಿಡುಗಡೆ ವಿಚಾರದಲ್ಲೂ ಸರ್ಕಾರವನ್ನು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು. ರೈತರ ಒಪ್ಪಿಗೆ ಪಡೆಯದೇ ಭೂ ಸಮೀಕ್ಷೆ ನಡೆಸಿರುವುದು ಸರಿಯಲ್ಲ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.