ಶೋಭಕ್ಕ ಬಿಡದಿ ಟೌನ್ ಶಿಪ್ ಗೆ ಟೆಂಡರ್ ಕರೆದಿದ್ದು ನಿಮ್ಮ 'ಯಜಮಾನ'; ನನ್ನ ಆಶಯವನ್ನು ಅರ್ಥೈಸಿಕೊಳ್ಳಿ: ಎಚ್.ಸಿ ಬಾಲಕೃಷ್ಣ
ಸಾರ್ವಜನಿಕ ಜೀವನದಲ್ಲಿರುವವರು ಯಾವುದೇ ಹೇಳಿಕೆಯ ಆಶಯವನ್ನು ಸರಿಯಾದ ಸಂದರ್ಭದಲ್ಲಿ ಅರ್ಥೈಸಿಕೊಳ್ಳಬೇಕು, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಸಂಪೂರ್ಣ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬಾಲಕೃಷ್ಣ ತಿಳಿಸಿದ್ದಾರೆ.

ಬೆಂಗಳೂರು: ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಸಂಪೂರ್ಣವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ ಬಾಲಕೃಷ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೋಭ ಕರಂದ್ಲಾಜೆ ಅವರನ್ನ ಅತ್ಯಂತ ಗೌರವದಿಂದ ಶೋಭಕ್ಕ ಎಂದು ಸಂಭೋದಿಸಿದ್ದೇನೆ. ಬಿಡದಿಟೌನ್ ಶಿಪ್ ಯೋಜನೆಗೆ 2010 ರಲ್ಲಿ ಟೆಂಡರ್ ಕರೆದಿದ್ದು ನಿಮ್ಮ ಯಜಮಾನ, ನಿಮ್ಮ ಸಾಹೇಬ ಎಂದು ಉಲ್ಲೇಖಿಸಿದ್ದೆ ಎಂದಿದ್ದಾರೆ.
ಒಬ್ಬ ಸಾಮಾನ್ಯ ಕಾರ್ಯಕರ್ತೆಯಾಗಿ ಅವರನ್ನು ಗುರುತಿಸಿ ಸಚಿವೆಯನ್ನಾಗಿ ಮಾಡಿ ರಾಜಕೀಯದಲ್ಲಿ ಉನ್ನತ ಸ್ಥಾನ ನೀಡಿ ಬೆಳೆಸಿದ ನಾಯಕರು ಯಡಿಯೂರಪ್ಪ ಅವರು ಎಂಬ ರಾಜಕೀಯ ಹಿನ್ನೆಲೆಯ ಉದ್ದೇಶದಿಂದ ಮಾತ್ರ ಸಾಹೇಬ, ಯಜಮಾನ ಎಂಬ ಪದಗಳನ್ನು ಬಳಸಿದ್ದೇನೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಸಾರ್ವಜನಿಕ ಜೀವನದಲ್ಲಿರುವವರು ಯಾವುದೇ ಹೇಳಿಕೆಯ ಆಶಯವನ್ನು ಸರಿಯಾದ ಸಂದರ್ಭದಲ್ಲಿ ಅರ್ಥೈಸಿಕೊಳ್ಳಬೇಕು, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಸಂಪೂರ್ಣ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬಾಲಕೃಷ್ಣ ತಿಳಿಸಿದ್ದಾರೆ.
ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ ಶಾಸಕ ಎಚ್.ಸಿ.ಬಾಲಕೃಷ್ಣ ಸುದ್ದಿಗೋಷ್ಠಿಯೊಂದರಲ್ಲಿ ಬಿಡದಿ ಟೌನ್‌ಶಿಪ್ ಹೋರಾಟದ ವಿಚಾರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಗ್ಗೆ ತೀರಾ ಲಘು ಭಾಷೆಯಲ್ಲಿ ಮಾತನಾಡಿದ್ದು, ಇದು ಅವರ ಅಸಭ್ಯತನದ ಪರಮಾವಧಿ ಮತ್ತು ಮಹಿಳೆಯರಿಗೆ ಅಗೌರವ ತೋರುವ ಕಾಂಗ್ರೆಸ್‌ನ ನಿಜ ಸಂಸ್ಕೃತಿಯನ್ನು ಪ್ರತಿಬಿಂಬಿಸಿದೆ ಎಂದಿದ್ದಾರೆ.
ಬಾಲಕೃಷ್ಣ ಅವರ ಮಾತುಗಳು ಮಹಿಳೆಯರಿಗೆ ಅಗೌರವ ತೋರುವ ಕಾಂಗ್ರೆಸ್ ಪಕ್ಷದ ಅಪ್ಪಟ ಸಂಸ್ಕೃತಿಯನ್ನು ಮತ್ತೆ ಅನಾವರಣಗೊಳಿಸಿದೆ ಎಂದಿದ್ದಾರೆ. ಮಹಿಳಾ ಜನಪ್ರತಿ ನಿಧಿಯೊಬ್ಬರನ್ನು ಏಕವಚನದಲ್ಲಿ ನಿಂದಿಸುತ್ತ ಸಂವೇದನಾರಹಿತ, ದರ್ಪದ ಮಾತನಾಡಿರುವ ಬಾಲಕೃಷ್ಣ ಈ ಕೂಡಲೇ ಮಹಿಳಾ ಸಮುದಾಯದ ಕ್ಷಮೆಯಾಚಿಸಬೇಕು ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



