ಸಚಿವ ಸಂಪುಟ ವಿಸ್ತರಣೆ: ನನಗೆ ಕೊಡಿ ಇಲ್ಲ ನಮ್ಮಪ್ಪಂಗೆ ಕೊಡಿ- ರಾಜೇಂದ್ರ; ರಾಜ್ಯದಲ್ಲಿ ಉಪ ಮುಖ್ಯಮಂತ್ರಿಗಳ ಸಂಖ್ಯೆ ಮೂರಕ್ಕೇರುವ ಸಾಧ್ಯತೆ!
ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ರಾಜೇಂದ್ರ ರಾಜಣ್ಣ, ತಮ್ಮ ಕುಟುಂಬಕ್ಕೂ ಸಚಿವ ಸ್ಥಾನದಲ್ಲಿ ಅವಕಾಶ ಸಿಗಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಈ ವಾರದಲ್ಲೇ ನಡೆಯುವ ಸಾಧ್ಯತೆಗಳು ದಟ್ಟವಾಗಿರುವ ಬೆನ್ನಲ್ಲೇ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಪ್ರಯಾಣಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಅಥವಾ ನಾಳೆ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬೆಳವಣಿಗೆಗಳು ನಡೆಯುವ ಮಾಹಿತಿ ಲಭ್ಯವಾಗಿದ್ದು, ಈ ವಾರದೊಳಗೆ ವಿಸ್ತರಣೆ ಖಚಿತವಾಗುವ ವಿಶ್ವಾಸವಿದೆ ಎಂದು ಹೇಳಿದರು.
ಇನ್ನು ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ರಾಜೇಂದ್ರ ರಾಜಣ್ಣ, ತಮ್ಮ ಕುಟುಂಬಕ್ಕೂ ಸಚಿವ ಸ್ಥಾನದಲ್ಲಿ ಅವಕಾಶ ಸಿಗಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.
ಮೊದಲ ಆದ್ಯತೆಯಾಗಿ ತಮ್ಮ ತಂದೆಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಲಿದ್ದು, ಅದು ಸಾಧ್ಯವಾಗದಿದ್ದರೆ ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಕೋರಲಿದ್ದೇನೆ ಎಂದು ತಿಳಿಸಿದರು.
ಸಂಪುಟ ವಿಸ್ತರಣೆಯ ಜೊತೆಯಲ್ಲೇ ಇನ್ನೂ ಇಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಲು ಕಾಂಗ್ರೆಸ್ ಹೈಕಮಾಂಡ್ ಚರ್ಚೆ ನಡೆಸಿದೆ. ಇದರೊಂದಿಗೆ ರಾಜ್ಯದಲ್ಲಿ ಉಪ ಮುಖ್ಯಮಂತ್ರಿಗಳ ಸಂಖ್ಯೆ ಮೂರಕ್ಕೇರುವ ಸಾಧ್ಯತೆ ಇದೆ,
ಇನ್ನೂ ರಾಜ್ಯದಲ್ಲಿ ಉಪ ಮುಖ್ಯಮಂತ್ರಿಗಳ ಸಂಖ್ಯೆ ಮೂರಕ್ಕೇರುವ ಸಾಧ್ಯತೆ ಇದೆ. ಲಿಂಗಾಯತರು ಮತ್ತು ಅಹಿಂದ ಸಮುದಾಯದ ತಲಾ ಒಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಲು ಕಾಂಗ್ರೆಸ್ ವರಿಷ್ಠರು ಚಿಂತನೆ ನಡೆಸಿದ್ದಾರೆ.
ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಮತ್ತು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಹೆಸರುಗಳು ಸಂಭಾವ್ಯ ಉಪ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿವೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



