ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ: CM ಡಿ.ಕೆ ಶಿವಕುಮಾರ್; Video
ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಎಲ್ಲರೂ ನಮ್ಮ ರೈತರೇ. ಯಾರ ಮೇಲೂ ಒತ್ತಡ ಹೇರುವುದಿಲ್ಲ, ತೊಂದರೆ ಕೊಡುವುದಿಲ್ಲ. ನಾವು ಅವರನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ, ಆ ಕುರಿತು ನಾನು ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ವಿಸ್ತರಣೆ ಮುಂದಿನ ವಾರ ನಡೆಯಲಿದೆ ಎಂದು ತಿಳಿಸಿದ್ದಾರೆ.
ಡಿಸಿಎಂ ಡಾ ಪರಮೇಶ್ವರ್ ಅವರ ಜೊತೆ ಇಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಯರಬಳ್ಳಿಯ ರೈತರ ಜಮೀನಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ಮಾಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ, ಪ್ರಧಾನ ಮಂತ್ರಿಗಳು ಈಗ ಕಣ್ಣು ತೆರೆದಿದ್ದಾರೆ. ನಾವು ಸಂಸತ್ತಿನಲ್ಲಿ ಚರ್ಚೆ ಮಾಡಿ ಎಂದು ಒತ್ತಾಯಿಸುತ್ತಿದ್ದೇವೆ, ವಿದ್ಯಾರ್ಥಿ ಪ್ರತಿಭಟನೆ ವೇಳೆ ಕಾನೂನು ಬಾಹಿರವಾಗಿ ಹಾಕಿರುವ ಕೇಸನ್ನು ವಾಪಸ್ ತೆಗೆದುಕೊಳ್ಳಿ, ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದೇವೆ. ದೇಶದ ಮಕ್ಕಳ ಭವಿಷ್ಯ ಹಿನ್ನೆಲೆಯಲ್ಲಿ ನಮ್ಮ ಹೋರಾಟ, ಪ್ರತಿಭಟನೆಗೆ ಬದ್ಧರಿದ್ದೇವೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಎಲ್ಲರ ಹಕ್ಕು, ಕೆಪಿಸಿಸಿ ಅಧ್ಯಕ್ಷರ ನೇಮಕಾತಿಯಾಗಿದ್ದು ಬಿಜೆಪಿ ಅವಧಿಯಲ್ಲಿ, ಈಗ ಅವರೇ ಸಿಕ್ಕಿಹಾಕಿಕೊಂಡಿದ್ದಾರೆ. ಗವರ್ನರ್ ಅವರು ತನಿಖೆಗೆ ಶಿಫಾರಸು ಮಾಡಿದ್ದಾರೆ, ತನಿಖೆ ಮಾಡಿಸುತ್ತೇವೆ, ತನಿಖೆಯಾಗಿ ಕಾನೂನು ಕ್ರಮ ಕೈಗೊಳ್ಳಲಿ ಎಂದರು.
ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಎಲ್ಲರೂ ನಮ್ಮ ರೈತರೇ. ಯಾರ ಮೇಲೂ ಒತ್ತಡ ಹೇರುವುದಿಲ್ಲ, ತೊಂದರೆ ಕೊಡುವುದಿಲ್ಲ. ನಾವು ಅವರನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ, ಆ ಕುರಿತು ನಾನು ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



