ಕಳೆದ ಬಾರಿ ಮೈಸೂರಿನವರೇ CM ಆಗಿದ್ದರು, ನನಗೆ ಅವಕಾಶ ಸಿಕ್ಕಿರಲಿಲ್ಲ; ಲಾಬಿ ಅವಶ್ಯಕತೆ ಇಲ್ಲ- ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ: ತನ್ವೀರ್ ಸೇಠ್
ಮಂಗಳವಾರ ನಿಶ್ಚಿತವಾಗಿ ಸಭೆ ನಡೆಯುತ್ತದೆ. ಬುಧವಾರ ಅಥವಾ ಗುರುವಾರ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದರು.

ಮೈಸೂರು: ಪಕ್ಷ ನಿಷ್ಠೆ ನನ್ನನ್ನು ಕಾಪಾಡುತ್ತದೆ. ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ, ಹಾಗಾಗಿ ಲಾಬಿ ಮಾಡಲು ದೆಹಲಿಗೆ ಹೋಗುವ ಅಗತ್ಯವಿಲ್ಲ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ವರಿಷ್ಠರ ಭೇಟಿಗೆ ರಾಜ್ಯ ನಾಯಕರು ತೆರಳಿದ್ದಾರೆ. ಮಂಗಳವಾರ ನಿಶ್ಚಿತವಾಗಿ ಸಭೆ ನಡೆಯುತ್ತದೆ. ಬುಧವಾರ ಅಥವಾ ಗುರುವಾರ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದರು.
ಕಳೆದ ಬಾರಿ ಮೈಸೂರಿನವರೇ ಮುಖ್ಯಮಂತ್ರಿ ಆಗಿದ್ದರು. ಹೀಗಾಗಿ ನನಗೆ ಅವಕಾಶ ಸಿಕ್ಕಿರಲಿಲ್ಲ. ನನ್ನ ನಿಷ್ಠೆ ಕುರಿತು ಹೈಕಮಾಂಡ್ ಗೆ ಗೊತ್ತಿದೆ. ಹೀಗಾಗಿ ನಾನು ದೆಹಲಿಗೆ ತೆರಳಿ ಲಾಬಿ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



