ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ; ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!
ಜಿಲ್ಲಾವಾರು ಸಿದ್ಧವಾಗುವ ವರದಿಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೆ ಸಲ್ಲಿಸಲಾಗುತ್ತದೆ ಎಂದು ತುಮಕೂರು ಜಿಲ್ಲೆಯ ವೀಕ್ಷಕಿ ಸಂಗೀತಾ ಬೆನಿವಾಲ್ ತಿಳಿಸಿದ್ದಾರೆ.

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಗಳ ವೇಳೆ ನಾಯಕರು ಪಕ್ಷಾಂತರ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಂಘಟನಾ ಬದಲಾವಣೆಗೆ ಮುಂದಾಗಿದೆ.
ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರ ನೇಮಕ ಪ್ರಕ್ರಿಯೆಯನ್ನು ನೇರವಾಗಿ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿರುವ ಹೈಕಮಾಂಡ್, ಆಯ್ಕೆ ಕುರಿತ ಅಂತಿಮ ತೀರ್ಮಾನವನ್ನು ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ. ವೇಣುಗೋಪಾಲ್ ಕೈಗೊಳ್ಳಲಿದ್ದಾರೆ.
ದೇಶವ್ಯಾಪಿ ನಡೆಯುತ್ತಿರುವ 'ಸಂಘಟನ್ ಸೃಜನ ಅಭಿಯಾನ' (Sangathan Srijan Abhiyan) ಅಡಿಯಲ್ಲಿ ಎಐಸಿಸಿ (AICC) ವೀಕ್ಷಕರು ಜಿಲ್ಲಾ ಮಟ್ಟದಲ್ಲಿ ಪಕ್ಷದ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷ ಸ್ಥಾನಾಕಾಂಕ್ಷಿಗಳು ಹಾಗೂ ಮುಖಂಡರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ.
ಜಿಲ್ಲಾವಾರು ಸಿದ್ಧವಾಗುವ ವರದಿಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೆ ಸಲ್ಲಿಸಲಾಗುತ್ತದೆ ಎಂದು ತುಮಕೂರು ಜಿಲ್ಲೆಯ ವೀಕ್ಷಕಿ ಸಂಗೀತಾ ಬೆನಿವಾಲ್ ತಿಳಿಸಿದ್ದಾರೆ.
ಈ ಅಭಿಯಾನ ದೇಶದಾದ್ಯಂತ ನಡೆಯುತ್ತಿದ್ದು, ಕರ್ನಾಟಕದಲ್ಲಿ ಆಗಸ್ಟ್ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಡಿಸಿಸಿ ಅಧ್ಯಕ್ಷರ ನೇಮಕದ ಕುರಿತು ಅಂತಿಮ ತೀರ್ಮಾನವನ್ನು ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ. ವೇಣುಗೋಪಾಲ್ ಸೇರಿ ಕೈಗೊಳ್ಳಲಿದ್ದಾರೆ.
ಈ ಕುರಿತು ಮಾತನಾಡಿದ ಮಾಜಿ ಸಂಸದ ಡಿ.ಕೆ. ಸುರೇಶ್, "ಕಾಂಗ್ರೆಸ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಂಬುವ ಪಕ್ಷವಾಗಿದೆ. ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ದೇಶಾದ್ಯಂತ ಡಿಸಿಸಿ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ರಾಹುಲ್ ಗಾಂಧಿ ಮುನ್ನಡೆಸುತ್ತಿದ್ದಾರೆ" ಎಂದು ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್‌ನ ವೀಕ್ಷಕರಾಗಿರುವ ಚಾಂಡಿ ಉಮ್ಮನ್ ಅವರೊಂದಿಗೆ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಘಟನಾ ಸಭೆಗಳಲ್ಲಿ ಭಾಗವಹಿಸಿದ್ದ ಡಿ.ಕೆ. ಸುರೇಶ್, "ಡಿಸಿಸಿ ಅಧ್ಯಕ್ಷರಾಗಲು ಆಸಕ್ತಿ ಇರುವವರು ಸ್ವತಃ ಅರ್ಜಿ ಸಲ್ಲಿಸಬಹುದು. ಕೆಪಿಸಿಸಿ ಅಧ್ಯಕ್ಷರು ಅಥವಾ ಹಿರಿಯ ನಾಯಕರು ಯಾರ ಹೆಸರನ್ನೂ ಶಿಫಾರಸು ಮಾಡುವುದಿಲ್ಲ. ಆಸಕ್ತರು ನೇರವಾಗಿ ಅರ್ಜಿ ಸಲ್ಲಿಸಬೇಕು," ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



