ಬೆನ್ನಿಗೆ ಚೂರಿ ಹಾಕುವ ಕೆಲಸ, ಬಿಜೆಪಿಗೆ ಸಹಾಯ ಮಾಡಲು ಹೀಗೆ ಮಾಡಿದ್ದಾರೆ: ಜಮೀರ್ ವಿರುದ್ಧ SS ಮಲ್ಲಿಕಾರ್ಜುನ್ ಆಕ್ರೋಶ
ಜಮೀರ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗಿದ್ದು, ʻದಾವಣಗೆರೆ ಉಪಚುನಾವಣೆಯಲ್ಲಿ ಕುಕ್ಕರ್‌ಗೆ ವೋಟ್ ಬೀಳಬೇಕುʼ ಎಂದು ಅವರು ಮಾತನಾಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ದಾವಣಗೆರೆ: ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧವೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ತೀವ್ರ ಕಿಡಿಕಾರಿದ್ದಾರೆ.
ಮಾಜಿ ಸಚಿನ ಜಮೀರ್ ಮತ್ತು ಸಿರಾಜ್ ನಡುವಿನ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ, ಈ ಕುರಿತು ಕಾಂಗ್ರೆಸ್ ಪಕ್ಷದಲ್ಲೇ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಜಮೀರ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗಿದ್ದು, ʻದಾವಣಗೆರೆ ಉಪಚುನಾವಣೆಯಲ್ಲಿ ಕುಕ್ಕರ್‌ಗೆ ವೋಟ್ ಬೀಳಬೇಕುʼ ಎಂದು ಅವರು ಮಾತನಾಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ಇಷ್ಟಕ್ಕೂ ಆಡಿಯೋದಲ್ಲೇನಿದೆ?
ಆಡಿಯೋದಲ್ಲಿ ಮುಸ್ಲಿಮರೆಲ್ಲಾ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಬದಲಾಗಿ ಪಕ್ಷೇತರರಿಗೆ ವೋಟ್ ಹಾಕಬೇಕು ಎಂದು ಆಗ್ರಹಿಸುವುದು ಎಂದು ಹೇಳಿದ್ದಾರೆ ಎನ್ನ. ಒಂದು ವೇಳೆ ಮುಸ್ಲಿಮರು ವೋಟ್ ಹಾಕಿಲ್ಲ ಅಂದ್ರೂ ಓಕೆ, ಕಾಂಗ್ರೆಸ್ ವೋಟ್ ಗಳು ಮೈನಸ್ ಆಗಬೇಕು.
ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚು ವೋಟ್ ಹಾಕಬೇಡಿ. ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷೇತರರಿಗೆ ಮತ ಹಾಕಿಸಿ. ಬಲವಂತವಾಗಿ ಮನೆಯಿಂದ ಕರೆದು ಬಂದು ವೋಟ್ ಹಾಕಿಸಬೇಡಿ ಎಂದು ಹೇಳಿರುವುದು ಆಡಿಯೋದಲ್ಲಿ ದಾಖಲಾಗಿದೆ.
ಜಮೀರ್ ವಿರುದ್ಧ SS ಮಲ್ಲಿಕಾರ್ಜುನ್ ಆಕ್ರೋಶ
ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ ಎಸ್ ಮಲ್ಲಿಕಾರ್ಜುನ್ ಅವರು, 'ಜಮೀರ್ ಅಹಮದ್ ಮಾತನಾಡಿದ್ದು ಆಡಿಯೋ ಮೂಲಕ ಹೊರ ಬಂದಿದೆ. ಹೈಕಮಾಂಡ್ ನಾಯಕರು ಎಲ್ಲವನ್ನೂ ನೋಡಿದ್ದಾರೆ. ಈ ಬಗ್ಗೆ ಅವರು ತೀರ್ಮಾನ ಮಾಡುತ್ತಾರೆ' ಎಂದರು.
ಬಿಜೆಪಿಗೆ ಸಹಾಯ ಮಾಡಲು ಅವರು ಹೀಗೆ ಮಾಡಿದ್ದಾರೆ. ಅವರಿಗೆ ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಆಗಿದೆ. ನಮ್ಮವರೇ ನಮ್ಮ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಬಾರದು. ಜನರ ಆಶೀರ್ವಾದದಿಂದ ನಮ್ಮ ಮಗ ಗೆದ್ದಿದ್ದಾನೆ. ಆಡಿಯೋ ವೈರಲ್ ಬಗ್ಗೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ. ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೆ ಎಂದರು.
ಅಂತೆಯೇ ನಾನು ಅವರನ್ನು ಉಚ್ಛಾಟನೆ ಮಾಡಿ ಎನ್ನುವಂತ ಕೆಳಮಟ್ಟದ ರಾಜಕೀಯ ಮಾಡಲ್ಲ. ಹೈಕಮಾಂಡ್ ನಾಯಕರು ಈ ಬಗ್ಗೆ ತಿರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ.
ಜಮೀರ್ ಆಪ್ತ ಸಿರಾಜ್ ದೂರು
ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದ ಬೆನ್ನಲ್ಲೇ, ಪ್ರಕರಣ ಈಗ ಕಾನೂನು ಸಮರದ ರೂಪ ಪಡೆದುಕೊಂಡಿದೆ. ತಮ್ಮ ವಿರುದ್ಧ ಸುಳ್ಳು ಆಡಿಯೋ ಸೃಷ್ಟಿಸಿ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮೊಹಮ್ಮದ್ ಸಿರಾಜ್ ಅವರು ದಾವಣಗೆರೆಯ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
"ನಾನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (KMDC) ನಾಮನಿರ್ದೇಶಿತ ಸದಸ್ಯನಾಗಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ, ರಾಜಕೀಯ ದುರುದ್ದೇಶದಿಂದ ನಮ್ಮನ್ನು ಗುರಿಯಾಗಿಸಿಕೊಂಡು ಈ ನಕಲಿ ಆಡಿಯೋ ಸೃಷ್ಟಿಸಲಾಗಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



