KPCC ಅಧ್ಯಕ್ಷ ಸ್ಥಾನಕ್ಕೆ CM ಡಿಕೆಶಿ ರಾಜೀನಾಮೆ: ಬಿ.ಕೆ ಹರಿಪ್ರಸಾದ್ ನೂತನ ಸಾರಥಿ; ಸತೀಶ್ ಜಾರಕಿಹೊಳಿಗೆ ತೀವ್ರ ನಿರಾಸೆ!
ಇದರ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿಗೆ ನೂತನ ಸಾರಥಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ನವದೆಹಲಿ: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರಿಗೆ ರವಾನಿಸಿದ್ದಾರೆ. ಇದರ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿಗೆ ನೂತನ ಸಾರಥಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಬಿಕೆ ಹರಿಪ್ರಸಾದ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಿ.ಕೆ. ಶಿವಕುಮಾರ್ ಅವರು ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. 'ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ' ಎಂಬ ಕಾಂಗ್ರೆಸ್ನ ಉನ್ನತ ತತ್ವದ ಅಡಿಯಲ್ಲಿ, ಶಿವಕುಮಾರ್ ಅವರು ಅಧ್ಯಕ್ಷ ಸ್ಥಾನವನ್ನು ತೆರವುಗೊಳಿಸಿದ್ದಾರೆ. ಅವರ ಸ್ಥಾನಕ್ಕೆ ಈಗ ಅನುಭವಿ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ತರಲಾಗಿದೆ.
ಸತೀಶ್ ಜಾರಕಿಹೊಳಿಗೆ ತೀವ್ರ ನಿರಾಸೆ
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸತೀಶ್ ಜಾರಕಿಹೊಳಿ ಮತ್ತು ಈಶ್ವರ ಖಂಡ್ರೆ ಅವರ ಹೆಸರುಗಳು ಪ್ರಬಲವಾಗಿ ಕೇಳಿಬಂದಿದ್ದವು. ಇಬ್ಬರೂ ನಾಯಕರು ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಇತ್ತೀಚೆಗೆ ಜಾರಿಗೆ ತಂದಿರುವ 'ಒಬ್ಬರಿಗೆ ಒಂದೇ ಸ್ಥಾನಮಾನ' ಎಂಬ ನಿರ್ಣಯದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ.
ಸತೀಶ್ ಜಾರಕಿಹೊಳಿ ಮತ್ತು ಈಶ್ವರ ಖಂಡ್ರೆ ಅವರು ಈಗಾಗಲೇ ಸಚಿವ ಸಂಪುಟ ಸೇರಿರುವುದರಿಂದ, ಅವರಿಗೆ ಅಧ್ಯಕ್ಷ ಸ್ಥಾನ ನೀಡುವುದು ನಿಯಮಕ್ಕೆ ವಿರುದ್ಧವಾಗುತ್ತಿತ್ತು. ಹೀಗಾಗಿ, ಯಾವುದೇ ಸಚಿವ ಸ್ಥಾನದ ಜವಾಬ್ದಾರಿ ಇಲ್ಲದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಗಲಿಗೆ ಪಕ್ಷ ಸಂಘಟನೆಯ ಹೊಣೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



