ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಬಿ.ಕೆ ಹರಿಪ್ರಸಾದ್ ಸೇರಿ ನಾಲ್ವರಿಗೆ ಟಿಕೆಟ್
ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಜೂನ್ 18 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಇಂದು ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.
ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಜೂನ್ 18 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಇಂದು ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಪಟ್ಟಿಯಲ್ಲಿ ಬಿಕೆ ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್ ಮತ್ತು ಶಿವಣ್ಣ ಮಳವಳ್ಳಿ ಅವರ ಹೆಸರಿದೆ.
ಬಿ.ಕೆ.ಹರಿಪ್ರಸಾದ್ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸಿದ್ದು, ಇನ್ನುಳಿದ ಎರಡು ಸ್ಥಾನಗಳಿಗೆ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಇನ್ನು ನಾಲ್ಕು ಸ್ಥಾನಕ್ಕೂ ಒಬಿಸಿ ಸಮುದಾಯದವರಿಗೆ ಮಣೆ ಹಾಕಿರುವುದು ಅಚ್ಚರಿಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



