ರಾಜಕೀಯ

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು? Video

ರಾಮಲಿಂಗಾ ರೆಡ್ಡಿಯವರು ಹಳ್ಳಿಯಲ್ಲಿ ಹೋಗಿ ಕೆಲಸ ಮಾಡಲು ಆಗುವುದಿಲ್ಲ, ಬೇರೆ ಖಾತೆ ಕೊಡಿ ಎಂದು ಕೇಳುತ್ತಿದ್ದಾರೆ. ಅವರ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುತ್ತೇನೆ, ಅವರು ನನಗೆ ತುಂಬಾ ಆತ್ಮೀಯ ಸ್ನೇಹಿತರು ಎಂದರು.

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು? Video
ರಾಮಲಿಂಗಾ ರೆಡ್ಡಿ, ಸಿಎಂ ಡಿ ಕೆ ಶಿವಕುಮಾರ್
Published On :

ಬೆಂಗಳೂರು: ತಮಗೆ ನೀಡಲಾದ ಖಾತೆಯಿಂದ ಅಸಮಾಧಾನಗೊಂಡು ಇಂದು ಶುಕ್ರವಾರ ಸಚಿವ ಸ್ಥಾನಕ್ಕೆ ರ ರಾಜೀನಾಮೆ ನೀಡಿರುವ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ನಿರ್ಧಾರದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್, “ರಾಮಲಿಂಗಾರೆಡ್ಡಿ ಅವರು ನನಗೆ ತುಂಬಾ ಆತ್ಮೀಯರು. ಪಕ್ಷ ಮತ್ತು ಸರ್ಕಾರದ ಬೆಳವಣಿಗೆಯಲ್ಲಿ ಅವರ ಪಾತ್ರ ದೊಡ್ಡದಿದೆ. ಅವರಿಗೆ ಉಂಟಾಗಿರುವ ಅಸಮಾಧಾನದ ಕುರಿತು ನಾನು ಖುದ್ದಾಗಿ ಅವರ ಜೊತೆ ಕುಳಿತು ಚರ್ಚಿಸಿ, ಎಲ್ಲಾ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುತ್ತೇನೆ” ಎಂದು ಹೇಳಿದ್ದಾರೆ.

ರಾಮಲಿಂಗಾ ರೆಡ್ಡಿಯವರು ಹಳ್ಳಿಯಲ್ಲಿ ಹೋಗಿ ಕೆಲಸ ಮಾಡಲು ಆಗುವುದಿಲ್ಲ, ಬೇರೆ ಖಾತೆ ಕೊಡಿ ಎಂದು ಕೇಳುತ್ತಿದ್ದಾರೆ. ಅವರ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುತ್ತೇನೆ, ಅವರು ನನಗೆ ತುಂಬಾ ಆತ್ಮೀಯ ಸ್ನೇಹಿತರು ಎಂದರು.

ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ರೆಡ್ಡಿ ಅವರು ತೀವ್ರ ಬೇಸರಗೊಂಡಿದ್ದಾರೆ ಎನ್ನಲಾಗಿದ್ದು, ಮುಖ್ಯಮಂತ್ರಿಗಳು ಅವರ ಮನವೊಲಿಸುವಲ್ಲಿ ಎಷ್ಟರಮಟ್ಟಿಗೆ ಯಶಸ್ವಿಯಾಗಲಿದ್ದಾರೆ ಎಂಬುದನ್ನು ನೋಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.