ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ತಪ್ಪಿದ್ದೇಕೆ? ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು..
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಅಸಲಿಗೆ ಕೈತಪ್ಪಿದ್ದೇಕೆ ಎಂಬ ಕಾರಣವನ್ನು ಸ್ವತಃ ಅವರ ಪುತ್ರ, ಕೇಂದ್ರ ಸಚಿವ ಹೆಚ್..ಡಿ. ಕುಮಾರಸ್ವಾಮಿ ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಬಹಿರಂಗಪಡಿಸಿದ್ದಾರೆ.

ಮಂಡ್ಯ: ರಾಜ್ಯಸಭಾ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ಹಿಂದುಳಿದ ವರ್ಗದ ನಾಯಕ ಪ್ರೊ. ಎಂ. ನಾಗರಾಜ ಅವರ ಹೆಸರನ್ನು ಬಿಜೆಪಿ ಘೋಷಿಸಿದ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದೆ. ಮಾಜಿ ಪ್ರಧಾನಿ ದೇವೇಗೌಡರಿಗೆ ಟಿಕೆಟ್ ಕೈತಪ್ಪಿದ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದರು. ಕರ್ನಾಟಕದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ತೀವ್ರ ಟೀಕೆ ಕೇಳಿಬಂದಿದೆ.
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಅಸಲಿಗೆ ಕೈತಪ್ಪಿದ್ದೇಕೆ ಎಂಬ ಕಾರಣವನ್ನು ಸ್ವತಃ ಅವರ ಪುತ್ರ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಬಹಿರಂಗಪಡಿಸಿದ್ದಾರೆ.
ಇಂದು ಮಂಡ್ಯ ತಾಲೂಕಿನ ತಗ್ಗಹಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯಸಭೆ ಟಿಕೆಟ್‌ಗೆ ಹೆಚ್.ಡಿ. ದೇವೇಗೌಡರು ಅರ್ಜಿಯೇ ಹಾಕಿರಲಿಲ್ಲ. ದೇವೇಗೌಡರ ಬಗ್ಗೆ ಕಾಂಗ್ರೆಸ್ಸಿಗರಿಗೆ ಈಗ ಅನುಕಂಪ ಬಂದಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಭಯ ಶುರುವಾಗಿದ್ದು, ನಮ್ಮ ನಡುವೆ ಬಿರುಕು ತರಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ದೇವೇಗೌಡರು ಅಧಿಕಾರಕ್ಕಾಗಿ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಪ್ರಧಾನಿ ಸ್ಥಾನವನ್ನೇ ಬಿಟ್ಟು ಬಂದಿದ್ದರು ಎಂದು ಹೇಳಿದರು.
ಕಳೆದ ಬಾರಿ ಹೆಚ್ಡಿ ದೇವೇಗೌಡ ಅವಿರೋಧ ಆಯ್ಕೆಗೆ ಕಾಂಗ್ರೆಸ್ ಬೆಂಬಲ ವಿಚಾರ ಸಂಬಂಧವೂ ಪ್ರತಿಕ್ರಿಯಿಸಿದ ಅವರು, ದೇವೇಗೌಡರು ಕಾಂಗ್ರೆಸ್ ಬೆಂಬಲದಿಂದ ರಾಜ್ಯಸಭೆಗೆ ಹೋಗಲಿಲ್ಲ. ಬದಲಾಗಿ ದೇವೇಗೌಡರ ವಿರುದ್ಧ ಇನ್ನೊಬ್ಬ ಅಭ್ಯರ್ಥಿ ನಿಲ್ಲುವ ಅವಕಾಶ ಇರಲಿಲ್ಲ. ಕಳೆದ ಬಾರಿ ಅಭ್ಯರ್ಥಿ ಹಾಕಲ್ಲ ಎಂದು ಯಡಿಯೂರಪ್ಪನವರು ಕರೆ ಮಾಡಿ ತಿಳಿಸಿದ್ದರು.
ಅದಾದ ಬಳಿಕ ನಾನು ಒತ್ತಾಯ ಮಾಡಿ ಅಭ್ಯರ್ಥಿ ಮಾಡಿದ್ದು. ಒಕ್ಕಲಿಗರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂಬ ಕಾಂಗ್ರೆಸ್ ಆರೋಪ ಸಂಬಂಧ ಉತ್ತರಿಸಿದ ಅವರು, ಒಕ್ಕಲಿಗ ಸಿಎಂ ಇರಬೇಕಾದರೆ ರಾಜ್ಯಸಭೆ ಸ್ಥಾನ ಪಡೆದು ಏನು ಮಾಡುತ್ತೀರಾ ಎಂದು ಕುಮಾರಸ್ವಾಮಿ ಕೇಳಿದರು.
ಡಿಕೆಶಿ ಹೇಳಿಕೆಗೆ ತಿರುಗೇಟು
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಏನು ಮಾಡಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಎಲ್ಲದಕ್ಕೂ ಸಾಕ್ಷಿ ಗುಡ್ಡೆ ಕೇಳುತ್ತಾರೆ. ನಾನೇನು ಮಾಡಿಲ್ಲ, ನನ್ನ ಬಳಿ ಏನು ಸಲಹೆ ಕೇಳ್ತಾರೆ ಅವರಿಗೆ ಫೋಟೋ ಬೇಕಿದೆ, ಅದಕ್ಕೆ ಎಲ್ಲೆಡೆ ಹೋಗ್ತಿದ್ದಾರೆ. ಅತಿ ವಿನಯಂ ಧೂರ್ತ ಲಕ್ಷಣಂ ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿಕೆಗೆ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




