ರಾಜಕೀಯ

'ಅವನು ನನ್ನ ವಿರುದ್ಧವೇ ದಾವಣಗೆರೆಯಲ್ಲಿ ಕೆಲಸ ಮಾಡಿದ್ದಾನೆ': ಜಮೀರ್ ವಿರುದ್ಧ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ; Video

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಂಪುಟದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೋರಲು ಅವರ ಬೆಂಬಲಿಗರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಬಂದಿದ್ದರು.

'ಅವನು ನನ್ನ ವಿರುದ್ಧವೇ ದಾವಣಗೆರೆಯಲ್ಲಿ ಕೆಲಸ ಮಾಡಿದ್ದಾನೆ': ಜಮೀರ್ ವಿರುದ್ಧ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ; Video
ಸಿದ್ದರಾಮಯ್ಯ, ಜಮೀರ್ ಅಹ್ಮದ್ ಖಾನ್(ಸಂಗ್ರಹ ಚಿತ್ರ)
Published On :

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಲ್ಪಸಂಖ್ಯಾತ ವರ್ಗದ ನಾಯಕ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಪರಮಾಪ್ತರಾಗಿದ್ದವರು. ಆದರೆ ಈಗ ದೂರವಾಗಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ಸಿದ್ದರಾಮಯ್ಯನವರ ‘ಪರಮಾಪ್ತ’ ಎಂದೇ ಗುರುತಿಸಿಕೊಂಡಿದ್ದ ಜಮೀರ್ ಅಹ್ಮದ್ ಖಾನ್ ವಿರುದ್ಧವೇ ಈಗ ಸಿದ್ದರಾಮಯ್ಯ ಮುನಿಸು ಹೊರಹಾಕಿದ್ದಾರೆ. ‘ಅವನು ನನ್ನ ವಿರುದ್ಧವೇ ದಾವಣಗೆರೆಯಲ್ಲಿ ಕೆಲಸ ಮಾಡಿದ್ದಾನೆ’ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.

ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದು ಏಕೆ?

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಂಪುಟದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೋರಲು ಅವರ ಬೆಂಬಲಿಗರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಬಂದಿದ್ದರು. ಆದರೆ, ಈ ಸಂದರ್ಭದಲ್ಲಿ ಬೆಂಬಲಿಗರ ಮನವಿ ಆಲಿಸುವ ಬದಲು ಸಿದ್ದರಾಮಯ್ಯನವರು ಅವರ ಮುಂದೆ ಜಮೀರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಿಟ್ಟಿನಿಂದ ಬೆಂಬಲಿಗರ ಮುಂದೆ ಗುಡುಗಿದ ಸಿದ್ದರಾಮಯ್ಯ, "ಅವನು ನನ್ನ ಪರಮಾಪ್ತ ಅಂತ ನೀವೆಲ್ಲ ಹೇಳ್ತೀರಾ, ಆದರೆ ಅವನು ಚುನಾವಣೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ" ಎಂದು ಗರಂ ಆಗಿ ಹೇಳಿದ್ದಾರೆ. ಅದಕ್ಕೆ ಬೆಂಬಲಿಗರು ಸಮಜಾಯಿಷಿ ನೀಡಲು ನೋಡಿದ್ದಾರೆ.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಜಮೀರ್ ಅಹ್ಮದ್ ಖಾನ್ ಅವರು ವಸತಿ ಸಚಿವರಾಗಿ ಪ್ರಭಾವಿ ಖಾತೆಯನ್ನು ನಿಭಾಯಿಸಿದ್ದರು. ಸಿದ್ದರಾಮಯ್ಯನವರು ಹೋದಲ್ಲೆಲ್ಲಾ ಜಮೀರ್ ಇರುತ್ತಿದ್ದರು. ಈಗಿನ ರಾಜಕೀಯ ಪರಿಸ್ಥಿತಿಯಲ್ಲಿ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆಯಲು ಜಮೀರ್ ಹರಸಾಹಸ ಪಡುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.