ಅಡ್ಡಮತದಾನದಿಂದ ಭುಗಿಲೆದ್ದ ಅಸಮಾಧಾನ: ಪಕ್ಷ ನಿಷ್ಠ ಯತ್ನಾಳ್ ಗೆ ವಿಪಕ್ಷ ನಾಯಕನ ಸ್ಥಾನ ನೀಡಿ; ಕುಮಾರ್ ಬಂಗಾರಪ್ಪ ಆಗ್ರಹ
ಅವರ ನಿಷ್ಠೆಯನ್ನು ಪರಿಗಣಿಸಿ, ಹೈಕಮಾಂಡ್ ತಪ್ಪುಗಳನ್ನು ಮನ್ನಿಸಬೇಕು. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡು ವಿಪಕ್ಷ ನಾಯಕನ ಸ್ಥಾನ ನೀಡಬೇಕು. ಅಲ್ಲದೆ, ಯತ್ನಾಳ್ ಅವರಿಗೆ ವಿಪಕ್ಷ ನಾಯಕ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.

ಬೆಂಗಳೂರು: ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ ಪಕ್ಷದಿಂದ ಉಚ್ಛಾಟನೆ ಮಾಡಿದ್ರೂ, ಬಿಜೆಪಿ ಪರವಾಗಿ ಮತ ಚಲಾಯಿಸಿದ್ದಾರೆ. ಅವರ ತಪ್ಪನ್ನು ಮನ್ನಿಸಬೇಕು. ಪಕ್ಷಕ್ಕೆ ಕರೆತಂದು ಬಿಜೆಪಿಯಿಂದ ವಿಪಕ್ಷ ನಾಯಕರನ್ನಾಗಿ ಮಾಡಬೇಕು ಎಂದು ರೆಬೆಲ್ ನಾಯಕ ಕುಮಾರ್ ಬಂಗಾರಪ್ಪ ಆಗ್ರಹಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಆಕ್ರೋಶ ಹೊರಹಾಕಿರುವ ಕುಮಾರ್ ಬಂಗಾರಪ್ಪ ಅವರು, ಬಿಜೆಪಿ ರಾಜ್ಯ ಘಟಕದಲ್ಲಿ ಬದಲಾವಣೆ ತರುವಂತೆ ದೆಹಲಿ ನಾಯಕರಿಗೆ ಮನವಿ ಮಾಡಿದ್ದಾರೆ.
ಪಕ್ಷದಿಂದ ಉಚ್ಛಾಟನೆ ಮಾಡಿದ್ದರೂ ಯತ್ನಾಳ್ ಅವರು ಬಿಜೆಪಿ ಪರವಾಗಿಯೇ ಮತ ಚಲಾಯಿಸಿದ್ದಾರೆ. ಅವರ ನಿಷ್ಠೆಯನ್ನು ಪರಿಗಣಿಸಿ, ಹೈಕಮಾಂಡ್ ತಪ್ಪುಗಳನ್ನು ಮನ್ನಿಸಬೇಕು. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡು ವಿಪಕ್ಷ ನಾಯಕನ ಸ್ಥಾನ ನೀಡಬೇಕುಅಲ್ಲದೆ, ಯತ್ನಾಳ್ ಅವರಿಗೆ ವಿಪಕ್ಷ ನಾಯಕ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.
ಹಾಲಿ ವಿಪಕ್ಷ ಸ್ಥಾನಗಳು, ರಾಜ್ಯಾಧ್ಯಕ್ಷ ಸ್ಥಾನ, ಪದಾಧಿಕಾರಿಗಳನ್ನ ಮುಂದುವರೆಸುವ ವಿಚಾರದಲ್ಲಿ ಮರು ಅವಲೋಕನ ಮಾಡಬೇಕಿದೆ. ಬೇರೆ ರಾಜ್ಯಗಳ ಬಿಜೆಪಿ ಘಟಕಗಳಲ್ಲಿ ಬದಲಾವಣೆ ಮಾಡಿದಂತೆ ರಾಜ್ಯ ಬಿಜೆಪಿಯಲ್ಲೂ ಮಾಡಬೇಕಿದೆ ಎಂದರಲ್ಲದೇ ಪಕ್ಷದ ಬಲವರ್ಧನೆಗೆ ಪಕ್ಷ ಬಿಟ್ಟವರ ಘರ್ ವಾಪಸಿಗೂ ಕುಮಾರ್ ಬಂಗಾರಪ್ಪ ಮನವಿ ಮಾಡಿದ್ದಾರೆ.

'ನಾನು ಬಂಡಾಯಗಾರನೂ ಅಲ್ಲ, ವಿರೋಧಿಯೂ ಅಲ್ಲ': ಪರಿಷತ್ ಚುನಾವಣೆ ಮುನ್ನ ಯತ್ನಾಳ್ ಪತ್ರ ಬರೆದು ಹೀಗೆ ಹೇಳಿದ್ದು ಯಾರಿಗೆ?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


