ರಾಜಕೀಯ

ಅವರಿಗೆ ಧೈರ್ಯವೇ ಇಲ್ಲ, ಪುಕ್ಕಲರು: RSS ವಿರುದ್ಧ ಬಿ.ಕೆ ಹರಿಪ್ರಸಾದ್ ಕಿಡಿ

KPCC ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಹರಿಪ್ರಸಾದ್, RSS ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಅವರಿಗೆ ಧೈರ್ಯವೇ ಇಲ್ಲ, ಪುಕ್ಕಲರು: RSS ವಿರುದ್ಧ ಬಿ.ಕೆ ಹರಿಪ್ರಸಾದ್ ಕಿಡಿ
ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್
Published On :

ಬೆಂಗಳೂರು: KPCC ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಹರಿಪ್ರಸಾದ್, RSS ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಆರ್​ಎಸ್​ಎಸ್​ನವರು ಪುಕ್ಕಲರು ಅವರಿಗೆ ಧೈರ್ಯವೇ ಇಲ್ಲ. ನಾವು ಸುಮ್ಮನಿರುವುದರಿಂದ ಅವರು ಮೆರೆಯುತ್ತಿದ್ದಾರೆ.

ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 2028ರ ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ 2029ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಮಹತ್ವದ ನಿರ್ಣಯಗಳನ್ನು ಕೈಗೊಂಡರು.

ಬಿ.ಕೆ. ಹರಿಪ್ರಸಾದ್ ಮತ್ತು ಡಿ.ಕೆ. ಶಿವಕುಮಾರ್ ಜೋಡಿ ಕಾಂಗ್ರೆಸ್ ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸಿ ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಲುವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅಧಿಕಾರ ಸ್ವೀಕರಿಸಿರುವುದು ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ರಾಜಕೀಯ ಅಧ್ಯಾಯಕ್ಕೆ ನಾಂದಿ ಹಾಡಿದ್ದು, ಮುಂದಿನ ಚುನಾವಣಾ ರಾಜಕಾರಣದಲ್ಲಿ ಅವರ ನಾಯಕತ್ವದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.